Home ದಕ್ಷಿಣ ಕನ್ನಡ Mangaluru : ಮಂಗಳೂರಿನಲ್ಲಿ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ – ಆಟೋ ಚಾಲಕ, ಸ್ನೇಹಿತರಿಂದ ಗ್ಯಾಂಗ್...

Mangaluru : ಮಂಗಳೂರಿನಲ್ಲಿ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ – ಆಟೋ ಚಾಲಕ, ಸ್ನೇಹಿತರಿಂದ ಗ್ಯಾಂಗ್ ರೇಪ್

Hindu neighbor gifts plot of land

Hindu neighbour gifts land to Muslim journalist

 

Mangaluru : ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ತಡರಾತ್ರಿ ನಶೆಯಲ್ಲಿ ಯುವತಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಕರಣಕ್ಕೆ ಬಿಗ್ ಬೆಸ್ಟ್ ಸಿಕ್ಕಿದೆ. ಆಟೋ ಚಾಲಕ ಹಾಗೂ ಆತನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಬಯಲಾಗಿದೆ.

 

 ಮಂಗಳೂರಿನ ಕಲ್ಲಾಪು ಬಳಿ ತಡರಾತ್ರಿ ಅನ್ಯ ರಾಜ್ಯದ ಯುವತಿ ಒಬ್ಬಳು ಮನೆಯೊಂದರ ಬಾಗಿಲು ಬಡಿದು ನೀರು ಕೇಳಿ ಕುಸಿದು ಬಿದ್ದಿದ್ದಳು. ಈ ವೇಳೆ ಯುವತಿಯ ಮೈಮೇಲೆ ಗಾಯಗಳಾಗಿದ್ದವು. ಈ ವೇಳೆ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣೆ ಪೊಲೀಸರು ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಪ್ರಕರಣಕ್ಕೆ ಇದೀಗ ಟ್ವಿಸ್ಟ್‌ ಸಿಕ್ಕಿದ್ದು, ಆಟೋ ಚಾಲಕ ಹಾಗೂ ಆತನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಬಯಲಾಗಿದೆ.

 

 ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೊ ಚಾಲಕ ಒಬ್ಬನನ್ನು ಪೊಲೀಸರು ಬಂಧಿಸಿದ್ದು, ಈತ ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಯುವತಿ ಮೇಲೆ ಎಸಗಿದ್ದಾನೆ ಎನ್ನಲಾಗಿದೆ. ಮುನ್ನೂರು ಗ್ರಾಮ ಮತ್ತು ಉಳ್ಳಾಲ ನಗರಸಭೆ ಗಡಿಯಲ್ಲಿರುವ ನೇತ್ರಾವತಿ ನದಿ ಸಮೀಪದ ಬೊಳ್ಳ ಹೌಸ್ ಬಳಿ ಘಟನೆ ಬುಧವಾರ ತಡರಾತ್ರಿ ನಡೆದಿದೆ.

 

ಅಂದಹಾಗೆ ಉದ್ಯೋಗ ಅರಸಿ ಬಂದಿರುವ ಪಶ್ಚಿಮ ಬಂಗಾಳ ಮೂಲದ ಯುವತಿ ಕೇರಳದ ಉಪ್ಪಳ ಎಂಬಲ್ಲಿ ವಾಸವಾಗಿದ್ದಳು. ಈಕೆ ತನ್ನ ಸ್ನೇಹಿತನ ಜೊತೆಗೆ ಮಂಗಳೂರಿಗೆ ಬಂದಿದ್ದ ವೇಳೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ ಆಕೆ ಒಬ್ಬಳೇ ಮಧ್ಯರಾತ್ರಿ ಹೊರಗೆ ಬಂದಿದ್ದಾಳೆ. ಹೀಗೆ ಬಂದವಳೇ ಸಿಕ್ಕ ರಿಕ್ಷಾ ಚಾಲಕನ ಬಳಿ ಸಹಾಯ ಕೇಳಿದ್ದಾಳೆ. ಸಹಾಯ ಮಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ಚಾಲಕ ಆಕೆಗೆ ಅಮಲು ಪದಾರ್ಥ ನೀಡಿ ಸ್ನೇಹಿತರ ಜೊತೆಗೆ ಸೇರಿ ಕೃತ್ಯವೆಸಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.