ಶನಿವಾರ, 24 ಅಕ್ಟೋಬರ್ 2026

ಉಜಿರೆ : ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ

ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಾಳೆ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಮಧ್ಯಾಹ್ನ 12 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಚಿತ ತಪಾಸಣೆ ಹಾಗೂ ಸಲಹೆಯನ್ನು ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ.ಅಂಕಿತಾ.ಜಿ.ಭಟ್ ನೀಡಲಿದ್ದಾರೆ ಎಂದು ಬೆನಕ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಗೋಪಾಲಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ