Home ದಕ್ಷಿಣ ಕನ್ನಡ ಮಂಗಳೂರು : ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ, ಕೊಲೆ ಯತ್ನ

ಮಂಗಳೂರು : ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ, ಕೊಲೆ ಯತ್ನ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ನಗರದ ವಿಶ್ವ ಹಿಂದೂ ಪರಿಷತ್
ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರುವ ಹಾಗೂ ದುಷ್ಕರ್ಮಿಗಳು ಹತ್ಯೆಗೂ ಯತ್ನಿಸಿರುವ ಘಟನೆಯೊಂದು ನಡೆದಿದೆ. ಬೈಕ್ ನಲ್ಲಿ ಬಂದಿದ್ದ ವ್ಯಕ್ತಿ ಮೂರು ಬಾರಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದಾರೆ. ನಂತರ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದರು. ಮಾತ್ರವಲ್ಲದೆ, ದೂರವಾಣಿ ಮೂಲಕವೂ ಹಲವು ಬಾರಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506, 507ರ ಅನ್ವಯ ಎಫ್‌ಐಆರ್ ದಾಖಲಾಗಿದೆ.

ಮಂಗಳೂರಿನ ಬಜೋಡಿ-ಬಿಕರ್ನಕಟ್ಟೆ ರಸ್ತೆಯಲ್ಲಿ ಕಾರು ಹಿಂಬಾಲಿಸಿದ್ದ ದುಷ್ಕರ್ಮಿಗಳು ಆಗಸ್ಟ್ 7ರಂದು ಕಾರಿಗೆ ಬೈಕ್ ತಾಗಿಸಿದ್ದರು. ಹಾಗೂ ಅದೇ ದಿನ ರಾತ್ರಿ 11.43ಕ್ಕೆ ಕಾರ್ಯಕರ್ತನಿಗೆ ಕರೆ ಮಾಡಿದ್ದ ಅವರು, ತುಳು ಮಿಶ್ರಿತ ಉರ್ದು ಭಾಷೆಯಲ್ಲಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

”ಇನಿ ತಪ್ಪಯ ಪಂಡ್‌ದ್ ಖುಷಿ ಮಲ್ಪೊಚ್ಚಿ, ಗೊತ್ತುಂಡು, ನನ್ನ ಮೂಜಿ ಜನ ಪಂಪುವೆಲ್ ಡ್ ಉಲ್ಲೆರತ್ತಾ ಬುಡ್ಡುಜಿ ಯಾನ್, ಕರ್ತಿನ ಬೇನೆ ಉಂಡು’ (ಈ ದಿನ ತಪ್ಪಿಸಿದ್ದಿ ಎಂದು ಖುಷಿ ಪಡಬೇಡ, ಗೊತ್ತಿದೆ. ಇನ್ನೂ ಮೂರು ಜನ ಪಂಪ್ ವೆಲ್‌ನಲ್ಲಿ ಇದ್ದಾರೆ. ನಾನು ಬಿಡುವುದಿಲ್ಲ. ಕೊಂದ ನೋವು ಇದೆ) ಎಂದು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.