Home ದಕ್ಷಿಣ ಕನ್ನಡ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ವಿಶ್ವ ಪುಂಡಿತ್ತೂರು ನಿಧನ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ವಿಶ್ವ ಪುಂಡಿತ್ತೂರು ನಿಧನ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಬಲ್ನಾಡು ನಿವಾಸಿ ವಿಶ್ವ ಪುಂಡಿತ್ತೂರು(48)ರವರುಜ.27ರಂದು ಸಂಜೆ ನಿಧನರಾದರು.

ಪುಂಡಿತ್ತೂರು ದಿ.ಸುಬ್ಬಣ್ಣ ಭಟ್ ರವರ ಪುತ್ರರಾದ ವಿಶ್ವಪುಂಡಿತ್ತೂರು ರವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯದಲ್ಲಿ ಪೂರ್ಣಾವಧಿ ಸೇವೆ ಸಲ್ಲಿಸಿದ್ದು, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿಜವಾಬ್ದಾರಿ ನಿರ್ವಹಿಸಿದ್ದರು. ಬಳಿಕದ ದಿನದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಬಳಿಕ ಮನೆಯಲ್ಲೇ ಆರೈಕೆ ಪಡೆಯುತ್ತಿದ್ದರು.

ವಿಶ್ವ ಪುಂಡಿತ್ತೂರು ರವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿದ್ದು, ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಅನುರಾಧ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.