ಭಾನುವಾರ, 25 ಅಕ್ಟೋಬರ್ 2026
Trending

ವಿಟ್ಲ : ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.

Sponsored

ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮೀಕಾ(14) ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಇಂದು ಮನೆಮಂದಿ ಕೆಲಸಕ್ಕೆ ಹೋದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಕಾರಣ ತಿಳಿದು ಬಂದಿಲ್ಲ.

ಕನ್ಯಾನ ಗ್ರಾಮದ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ಈ ವಿದ್ಯಾರ್ಥಿನಿಯ ಕುಟುಂಬ ವಾಸವಾಗಿದ್ದರು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.