Home ದಕ್ಷಿಣ ಕನ್ನಡ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ ದಿನ- ರವಿಶಂಕರ್

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ
ವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ ದಿನ- ರವಿಶಂಕರ್

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ವಿಶ್ವ ಯೋಗ ದಿನದ ಅಂಗವಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆಯು ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಮಾತನಾಡಿ ಮಾನವನ ಅಂತಸತ್ವವನ್ನು ಅರಿಯುವ ವಿಧಾನವನ್ನು ತಿಳಿಸಿಕೊಟ್ಟ ದೇಶ ಭಾರತ. ಖುಷಿ ಸಂಸ್ಕೃತಿಯ ಒಂದು ಭಾಗವೇ ಯೋಗ. ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ ಏಕಾಗ್ರತೆ ಹೆಚ್ಚುವುದಲ್ಲದೆ ನಮ್ಮ ಮಾನಸಿಕ ಮತ್ತು ದೈಹಿಕ ಕ್ಷಮತೆ ಅಭಿವೃದ್ಧಿಯಾಗುತ್ತದೆ. ಯೋಗಕ್ಕಿರುವ ಅಗಾಧ ಶಕ್ತಿ ಬೇರೊಂದಿಲ್ಲ, ಸಣ್ಣ ಕಾಲಾವಧಿಯಲ್ಲೂ ಯೋಗ ಮಾಡಿ ನೆಮ್ಮದಿ ಪಡೆಯಬಹುದು. ಪರಿಪೂರ್ಣ ಜೀವನಕ್ಕೆ ಯೋಗ ಅತ್ಯಗತ್ಯ. ಮಾನವ ಕುಲದ ಏಕತೆಯ ಪರಿಕಲ್ಪನೆಗೆ ಯೋಗ ಪ್ರಾಮುಖ್ಯವಾದುದು. ನಮ್ಮ ಆಧ್ಯಾತ್ಮದಲ್ಲಿ ಯೋಗ ಇದೆ, ನಮ್ಮ ಜೀವನ ಪದ್ದತಿಯಲ್ಲಿ ಯೋಗ ಇದೆ. ಯೋಗ ಕೇವಲ ಹಿಂದುಗಳಿಗೆ ಮಾತ್ರ ಅಲ್ಲ. ವಸುದೈವ ಕುಟುಂಬಕಂ ಅನ್ನುವ ಆದರ್ಶದಲ್ಲಿ ಇಡೀ ಪ್ರಪಂಚದ ಜನರ ಆರೋಗ್ಯ ಕಾಳಜಿಯ ಹಿನ್ನೆಲೆಯಲ್ಲಿ ಯೋಗ ಅತ್ಯಂತ ಸಹಕಾರಿ. ಇದಲ್ಲದೆ, ಯೋಗವು ನಮ್ಮ ದೇಹದ ಮೇಲೆ ಮತ್ತು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಲು ಸಹಾಯ ಮಾಡುತ್ತದೆ. ನಮ್ಮ ಒತ್ತಡ ಮತ್ತು ಆತಂಕವನ್ನು ಬಿಡುಗಡೆ ಮಾಡಲು ಕೂಡ ಸಹಕಾರಿ ಎಂದರು. ಅಲ್ಲದೆ ವಿವಿಧ ಆಸನಗಳನ್ನು ವಿದ್ಯಾರ್ಥಿಗಳಲ್ಲಿ ಮಾಡಿಸಿ, ಅವುಗಳ ಪ್ರಾಮುಖ್ಯತೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮಾತನಾಡಿ ಯೋಗ ವ್ಯಾಯಾಮ ಮಾತ್ರವಲ್ಲದೆ ನಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಯೋಗಾಸನ ಸ್ಫರ್ಧೆಯಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರನ್ನು ಇದೇ ಸಂದರ್ಭದಲ್ಲಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಭೀಮ ಭಾರದ್ವಾಜ್ ಮತ್ತು ಶ್ರೀಧರ ಶೆಟ್ಟಿಗಾರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ದಯಾಮಣಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಜ್ಯೋತಿ ವಂದಿಸಿದರು.