Home ಬೆಂಗಳೂರು ಗೃಹ ಸಚಿವ ಅರಗ ಜ್ಞಾನೇಂದ್ರ ಮನೆಗೆ ನುಗ್ಗಲು ಯತ್ನ!! ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ...

ಗೃಹ ಸಚಿವ ಅರಗ ಜ್ಞಾನೇಂದ್ರ ಮನೆಗೆ ನುಗ್ಗಲು ಯತ್ನ!! ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

Hindu neighbor gifts plot of land

Hindu neighbour gifts land to Muslim journalist

ಎಬಿವಿಪಿ ಕಾರ್ಯಕರ್ತರು ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳನ್ನು ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆ ಪ್ರಕರಣಗಳು ನಡೆಯುತ್ತಿದೆ, ಯುವ ಜನತೆಗೆ, ಸಾರ್ವಜನಿಕರಿಗೆ ರಕ್ಷಣೆ ಇಲ್ಲದಾಗಿದೆ. ಹಾಗಾಗಿ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬೆಂಗಳೂರಿನ ಜಯಮಹಲ್ ಬಳಿ ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸದ ಎದುರು ಎಬಿವಿಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.

ರಾಜ್ಯ ಸರಕಾರದ ವಿರುದ್ಧ ಎಬಿವಿಪಿ ಕಾರ್ಯಕರ್ತರಿ ಧಿಕ್ಲಾರ ಹಾಕುತ್ತಾ, ಗೃಹ ಸಚಿವರ ಮನೆಗೆ ನುಗ್ಗಿ ಬಾಗಿಲು ತೆರೆಯಲು ಪ್ರಯತ್ನ ಮಾಡಿದ್ದಾರೆ‌. ಗೃಹ ಸಚಿವ ನಿವಾಸದ ಬಳಿ ಇದ್ದ ಹೂ ಕುಂಡಗಳನ್ನು ಪುಡಿಗೈದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿಗಳು ಎಬಿವಿಪಿ ಕಾರ್ಯಕರ್ತರನ್ನು ತಡೆದಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ವಿದ್ಯಾರ್ಥಿ ಕಾರ್ಯಕರ್ತರ ನಡುವೆ ತಳ್ಳಾಟ, ವಾಗ್ವಾದ, ನೂಕಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನೂರಾರು ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.