Home latest Bengaluru: ಬೆಂಗಳೂರು ಮೆಟ್ರೋದಲ್ಲಿ ಯುವತಿಯ ಖಾಸಗಿ ಅಂತ ಮುಟ್ಟಿದ ಕಾಮುಕ !! ವಿಡಿಯೋ ವೈರಲ್

Bengaluru: ಬೆಂಗಳೂರು ಮೆಟ್ರೋದಲ್ಲಿ ಯುವತಿಯ ಖಾಸಗಿ ಅಂತ ಮುಟ್ಟಿದ ಕಾಮುಕ !! ವಿಡಿಯೋ ವೈರಲ್

Bengaluru

Hindu neighbor gifts plot of land

Hindu neighbour gifts land to Muslim journalist

Bengaluru: ಸಾರ್ವಜನಿಕ ಸ್ಥಳಗಳಲ್ಲಿ ಇತ್ತೀಚೆಗೆ ಕಾಮುಕರ ಚೇಷ್ಟೆಗಳು ಹೆಚ್ಚಾಗುತ್ತಿವೆ. ಎಲ್ಲೆಂದರಲ್ಲಿ ಮಹಿಳೆಯರೊಂದಗೆ ಅನುಚಿತವಾಗಿ ವರ್ತಿಸುವುದು, ಅವರ ಖಾಸಗಿ ಅಂಗ ಸ್ಪರ್ಷಿಸುವುದು ಮಾಡುತ್ತಾ ತಮ್ಮ ತೀಟೆ ತೀರಿಸಿಕೊಳ್ಳುತ್ತಿರುತ್ತಾರೆ. ಅದರಲ್ಲೂ ಮೆಟ್ರೋಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂತೆಯೇ ಇದೀಗ ಬೆಂಗಳೂರಿನ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಯುವತಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಹೌದು, ಬೆಂಗಳೂರು (Bengaluru) ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಜನವರಿ 1 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವಕನೋರ್ವ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ಮೆಟ್ರೋದಿಂದ ಇಳಿಯುತ್ತಿದ್ದಂತೆ ಯುವತಿ (Bengaluru Woman), ಯುವಕನಿಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾಳೆ. ಅಲ್ಲದೆ ವ್ಯಕ್ತಿಯನ್ನು ಸಿಬ್ಬಂದಿಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೇಳಿ ಬಂದಿದೆ.

ಇದನ್ನೂ ಓದಿ: Ravi Basrur: ರವಿ ಬಸ್ರೂರು ಹೆಸರೇ ಸ್ವಂತದಲ್ಲ, ಹಾಗಾದರೆ ನಿಜವಾದ ಹೆಸರೇನು? ಸಂಗೀತ ನಿರ್ದೇಶಕನ ದಯನೀಯ ಕಥೆ!!

ಇನ್ನು ಆ ವ್ಯಕ್ತಿ ಪೊಲೀಸರ ಬಳಿ ತನ್ನ ತಪ್ಪೊಪ್ಪಿಕೊಂಡಿದ್ದು, ಮುಂದೆ ಹೀಗೆ ನಡೆದುಕೊಳ್ಳುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಉಪ್ಪಾರಪೇಟೆ ಠಾಣೆ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಒಂದು ವಾರದ ಬಳಿಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೃತ್ಯ ಎಸಗಿದ್ದ ಯುವಕ ಮೂಲತಃ ಉತ್ತರ ಭಾರತದ ನಿವಾಸಿ ಎಂದು ತಿಳಿದುಬಂದಿದೆ.

https://youtu.be/ZplBy0K9qQs?si=-8DXr8prG-Kf1wnK