Home ಬೆಂಗಳೂರು BMTC Free Driving Training: BMTC ಯಿಂದ ಉಚಿತ ಲಘು, ಭಾರಿ ವಾಹನ ಚಾಲನ ತರಬೇತಿ...

BMTC Free Driving Training: BMTC ಯಿಂದ ಉಚಿತ ಲಘು, ಭಾರಿ ವಾಹನ ಚಾಲನ ತರಬೇತಿ | ಆಸಕ್ತರು ಅರ್ಜಿ ಸಲ್ಲಿಸಿ

Hindu neighbor gifts plot of land

Hindu neighbour gifts land to Muslim journalist

ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಉಚಿತ ವಾಹನ ಚಾಲನಾ ತರಬೇತಿ ನೀಡಲು ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹಾಗಾಗಿ ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್‌.ಪಿ) ಅಡಿಯಲ್ಲಿ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನ ತರಬೇತಿ ನೀಡಲು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ತರಬೇತಿ ನಂತರ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಚಾಲನ ಅನುಜ್ಞಾಪತ್ರ / ಬ್ಯಾಡ್ಜ್‌ ಅನ್ನು ನೀಡಲಾಗುತ್ತದೆ.

ಈ ತರಬೇತಿ ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿ (ಎಸ್‌.ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌.ಟಿ)ಗಳ ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು /ಸಲ್ಲಿಸಬೇಕಾದ ದಾಖಲಾಲೆಗಳ ವಿವರಗಳನ್ನು ಕೆಳಕಂಡಂತೆ ನೀಡಲಾಗಿದೆ.
• ಲಘು ವಾಹನ ಚಾಲನಾ ತರಬೇತಿ (ಕಾರ್/ ಜೀಪ್) ಗೆ ಅರ್ಹತೆ : ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 45 ವರ್ಷ ಮೀರಿರಬಾರದು. ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣ ಪತ್ರ ಅಥವಾ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣಾ ಪ್ರಮಾಣ ಪತ್ರ ಅಥವಾ ನೋಟರಿಯಿಂದ ಪ್ರಮಾಣ ಪತ್ರ ಹೊಂದಿರಬೇಕು.
ಆಧಾರ್ ಕಾರ್ಡ್‌, ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ-5

ಭಾರಿ ವಾಹನ ಚಾಲನಾ ತರಬೇತಿ (ಬಸ್) ಗೆ ಅರ್ಹತೆ :
ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 45 ವರ್ಷ ಮೀರಿರಬಾರದು. ಲಘು ವಾಹನ ಚಾಲನಾ ಅನುಜ್ಞಾ ಪತ್ರ ಪಡೆದು ಒಂದು ವರ್ಷ ಪೂರೈಸಿರಬೇಕು. ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣ ಪತ್ರ ಅಥವಾ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣಾ ಪ್ರಮಾಣ ಪತ್ರ ಅಥವಾ ನೋಟರಿಯಿಂದ ಪ್ರಮಾಣ ಪತ್ರ ಪಡೆದಿರಬೇಕು. ಆಧಾರ್ ಕಾರ್ಡ್‌, ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ-5

ಅಭ್ಯರ್ಥಿಗಳಿಗೆ ಲಘು / ಭಾರಿ ವಾಹನ ಚಾಲನಾ ತರಬೇತಿ 30 ದಿನಗಳು ಇರುತ್ತವೆ. ತರಬೇತಿ ಅವಧಿಯಲ್ಲಿ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ಉಚಿತವಾಗಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ರೀತಿ ಈ ಬಗೆ ಇದೆ:
ಮೇಲೆ ತಿಳಿಸಲಾದ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ 02 ಸೆಟ್‌ ಜೆರಾಕ್ಸ್‌ ಪ್ರತಿಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ, ತರಬೇತಿ ಕೊಠಡಿ, 2ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು – 560027 ಗೆ ಕಳುಹಿಸಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-12-2022
ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ www.mybmtc.com ಗೆ ಭೇಟಿ ನೀಡಿ ಪಡೆಯಬಹುದು. ಸಂಪರ್ಕಕ್ಕಾಗಿ : 080-22537481, 7892529634, 7760576556.