Home Entertainment ನಟ ಚೇತನ್ ಗೆ ಮತ್ತೊಂದು ಸಂಕಷ್ಟ ; ಎದುರಾಯಿತೇ ಕಂಟಕ ?

ನಟ ಚೇತನ್ ಗೆ ಮತ್ತೊಂದು ಸಂಕಷ್ಟ ; ಎದುರಾಯಿತೇ ಕಂಟಕ ?

Hindu neighbor gifts plot of land

Hindu neighbour gifts land to Muslim journalist

ನಟ ಚೇತನ್ ಇತ್ತೀಚಿಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ ಅವರ ವಿರುದ್ಧದ ಮತ್ತೊಂದು ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸುವುದಕ್ಕೆ ಸರ್ಕಾರದ ಅನುಮತಿಯನ್ನು ಪೊಲೀಸರು ಕೇಳಿದ್ದಾರೆ. ಅನುಮತಿ ದೊರೆತಲ್ಲಿ ಚೇತನ್​ಗೆ ಮತ್ತೆ ಸಂಕಷ್ಟ ಎದುರಾಗಲಿದೆ.

ನಟ, ಸಾಮಾಜಿಕ ಹೋರಾಟಗಾರ ಚೇತನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಬಸವನಗುಡಿ ಪೊಲೀಸರು ಸರ್ಕಾರದ ಅನುಮತಿ ಕೋರಿ ಪತ್ರ ಬರೆದಿದ್ದಾರೆ.

ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಚೇತನ್ ವಿರುದ್ಧ ಕಳೆದ ವರ್ಷ ಜೂನ್ 10ರಂದು ವಿಪ್ರ ಯುವ ವೇದಿಕೆಯ ಅಧ್ಯಕ್ಷ ಪವನ್ ಕುಮಾರ್ ಶರ್ಮಾ ಬಸವನಗುಡಿ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಐಪಿಸಿ ಸೆಕ್ಷನ್ 153 ನಡಿ ಪ್ರಕರಣ ದಾಖಲಿಸಿಕೊಂಡಿದ್ದು, ದೂರಿನ ವಿಚಾರಣೆ ಕೂಡ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 153ರ ಅಡಿ ದಾಖಲಾದ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಗೆ ಸರ್ಕಾರದ ಅನುಮತಿ ಅಗತ್ಯವಿರುವುದರಿಂದ ಅನುಮತಿ ಕೋರಿ ಬಸವನಗುಡಿ ಪೊಲೀಸರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.