Home ಬೆಂಗಳೂರು ಪೊಲೀಸ್ ಅಧಿಕಾರಿ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ | 5 ಬಾರಿ ಗರ್ಭಪಾತ ಮಾಡಿಸಿದ್ದ ಅಧಿಕಾರಿ...

ಪೊಲೀಸ್ ಅಧಿಕಾರಿ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ | 5 ಬಾರಿ ಗರ್ಭಪಾತ ಮಾಡಿಸಿದ್ದ ಅಧಿಕಾರಿ ಇದೀಗ ನಾಪತ್ತೆ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ.

ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಉಮೇಶ್ ವಿರುದ್ಧ ಯುವತಿಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದಾರೆ.

ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಲಾಗಿದೆ.

5 ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ದಾವಣಗೆರೆ ಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಲಾಗಿದೆ.

ಆತ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗ ಕ್ಕೆ ಬಂದು ಬಲತ್ಕಾರ ಮಾಡಿದ್ದಾರೆ. ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪವೂ ಕೇಳಿಬಂದಿದೆ.

ಆರೋಪಿ ಇನ್ಸ್ ಪೆಕ್ಟರ್ ಉಮೇಶ್ ಗೆ ಈಗಾಗಲೇ ಇಬ್ಬರು ಪತ್ನಿಯರಿದ್ದಾರೆ. ಮೂರನೆ ಪತ್ನಿಯಾಗಿ ಇರು ಎಂದು ಒತ್ತಡ ಹೇರಿದ್ದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಸರ್ಕಲ್ ಇನ್ಸ್ ಪೆಕ್ಟರ್ ಉಮೇಶ್ ಇದೀಗ ತಲೆಮರೆಸಿಕೊಂಡಿದ್ದಾನೆ.