Home ಬೆಂಗಳೂರು ಕರ್ನಾಟಕದಲ್ಲಿ ಪತ್ತೆಯಾಯ್ತು ಮೊದಲ ಮಂಕಿಪಾಕ್ಸ್ ಪ್ರಕರಣ!

ಕರ್ನಾಟಕದಲ್ಲಿ ಪತ್ತೆಯಾಯ್ತು ಮೊದಲ ಮಂಕಿಪಾಕ್ಸ್ ಪ್ರಕರಣ!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ಚೇತರಿಸಿಕೊಂಡ ಬೆನ್ನಲ್ಲೇ ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್​ ಪತ್ತೆಯಾಗಿದೆ.

ಹೌದು. ಕರ್ನಾಟಕದಲ್ಲಿ ಮಂಕಿಪಾಕ್ಸ್ ಕುರಿತು ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಂಡರು ಮೊದಲ ಕೇಸ್ ಪತ್ತೆಯಾಗಿದೆ. ಆಫ್ರಿಕಾ ಮೂಲದ ವ್ಯಕ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ ಮಂಕಿಪಾಕ್ಸ್​​ ಗುಣ ಲಕ್ಷಣಗಳು ಕಂಡುಬಂದಿದ್ದು, ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಸೂಚನೆ ನೀಡಿದಂತೆ 72 ಗಂಟೆಗಳ ಮಧ್ಯಂತರದಲ್ಲಿ 2 ಬಾರಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರಿಗೂ ಪರೀಕ್ಷೆ ಮಾಡಲಾಗಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗೆ ಹೆಚ್ಚಿನ ಶುಶ್ರೂಶೆ ಮಾಡಲಾಗುತ್ತಿದೆ. ಜುಲೈ 4ನೇ ತಾರೀಖು ರೋಗಿ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದ್ದು, ಕಿಡ್ನಿ ಕಸಿ ಮಾಡಲು ಬಂದಿದ್ದ. ಬಳಿಕ ಈತನಿಗೆ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಹೇಳಿದ್ದಾರೆ.

ಇತ್ತ ಕಡೆ, ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು ಚೇತರಿಸಿಕೊಂಡಿದ್ದಾರೆ. ಕೇರಳದ ಕೊಲ್ಲಂನ 35 ವರ್ಷದ ವ್ಯಕ್ತಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಇಂದು ತಿಳಿಸಿದ್ದಾರೆ.

ಸೋಂಕಿಗೆ ಸಂಬಂಧಿಸಿದಂತೆ ಎಲ್ಲ ಪರೀಕ್ಷೆಗಳನ್ನು ನಡೆಸಲಾಗಿದ್ದು ದೇಹದಲ್ಲಿ ಯಾವುದೇ ಕಲೆಗಳು ಇಲ್ಲ ಎಂದು ಸಚಿವರು ಹೇಳಿದ್ದಾರೆ. ರೋಗಿಯು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ಚರ್ಮದ ಉಬ್ಬುಗಳು ಸಂಪೂರ್ಣವಾಗಿ ಗುಣಮುಖವಾಗಿವೆ. ಇಂದು ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು Ms ಜಾರ್ಜ್ ಹೇಳಿದರು.