Home ಬೆಂಗಳೂರು ಹಿಜಾಬ್ ವಿವಾದ : ಶಾಲಾ ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ! ಫೆ.22 ರವರೆಗೆ ಜಾರಿಗೆ...

ಹಿಜಾಬ್ ವಿವಾದ : ಶಾಲಾ ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ! ಫೆ.22 ರವರೆಗೆ ಜಾರಿಗೆ ಬರುವಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಬರುವ ಶಾಲಾ ಕಾಲೇಜುಗಳ ಸುತ್ತಲೂ 200 ಮೀಟರ್ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

ಫೆ.22 ರವರೆಗೆ ಜಾರಿಗೆ ಬರುವಂತೆ ನಾಲ್ಕು ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ. ಒಂದು ವೇಳೆ ಕಾನೂನು ಉಲ್ಲಂಘನೆ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಆದೇಶಿಸಿದಲ್ಲಿ ತಿಳಿಸಿದ್ದಾರೆ

ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿರುವ ಶಾಲಾ ಕಾಲೇಜು ಹಾಗೂ ಇನ್ನಿತರ ಶೈಕ್ಷಣಿಕ ಸಂಸ್ಥೆಗಳ ಮುಂದೆ ನಾಲ್ಕು ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.