Home Karnataka State Politics Updates Karnataka budget 2023: ಮಹಿಳೆಯರು ಮತ್ತು ಮಕ್ಕಳಿಗಾಗಿ ಬಜೆಟ್ ಇಷ್ಟೆಲ್ಲಾ ಸವಲತ್ತು ಕೊಡ್ತಿದ್ಯಾ ?

Karnataka budget 2023: ಮಹಿಳೆಯರು ಮತ್ತು ಮಕ್ಕಳಿಗಾಗಿ ಬಜೆಟ್ ಇಷ್ಟೆಲ್ಲಾ ಸವಲತ್ತು ಕೊಡ್ತಿದ್ಯಾ ?

Karnataka budget 2023
Image source :The indian express

Hindu neighbor gifts plot of land

Hindu neighbour gifts land to Muslim journalist

Karnataka Budget 2023: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ತಮ್ಮ 14ನೇ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ (Karnataka Budget 2023) ವಿವಿಧ ಇಲಾಖೆಗಳಿಗೆ ಅನುದಾನ ಘೋಷಿಸಿದ್ದಾರೆ. ಹಾಗೇ ಬಜೆಟ್‌ನಲ್ಲಿ ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಿದ್ದರಾಮಯ್ಯ ಕೊಡುಗೆ ನೀಡಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 24166 ಕೋಟಿ ರೂ ಅನುದಾನ ಹಂಚಿಕೆಯಾಗಿದೆ.

 

ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿ ದೊರೆಯುತ್ತದೆ. ಈ ಎಲ್ಲಾ ಸೌಲಭ್ಯ BPL ಮತ್ತು APL ಕಾರ್ಡುದಾರರಿಗೂ ಲಭ್ಯವಾಗಲಿದೆ‌. ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ತಯಾರಕರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿಯರೂ ಸಹ ಈ ಯೋಜನೆಯ ಲಾಭ ಪಡೆಯಬಹುದು. ಈ ಯೋಜನೆಗಾಗಿ ವಾರ್ಷಿಕ ಸುಮಾರು 30,000 ಕೋಟಿ ರೂ. ವೆಚ್ಚವಾಗಲಿದೆ.

 

ರಾಜ್ಯದಲ್ಲಿನ ಆಸಿಡ್ ದಾಳಿ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಇವರಿಗೆ ಕೆಲವು ಸೌಲಭ್ಯಗಳನ್ನು ಒದಗಿಸಲು ರಾಜ್ಯ‌ ಸರ್ಕಾರ ಮುಂದಾಗಿದೆ. ಇವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಐದು 21 ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು ಎರಡು ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

 

ಬಜೆಟ್ ನಲ್ಲಿ ವಿಶೇಷಚೇತನರಿಗೂ ಸಿಹಿಸುದ್ದಿ ಸಿಕ್ಕಿದೆ. ಆರ್ಥಿಕವಾಗಿ ಹಾಗೂ ಸದೃಢತೆಯನ್ನು ಸಾಮಾಜಿಕವಾಗಿ ಇಲಾಖೆಯಲ್ಲಿ ನೋಂದಣಿಯಾಗಿರುವ ಸುಮಾರು 4,000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲಾಗುವುದು. ಇದಕ್ಕೆ ಸುಮಾರು 30 ಕೋಟಿ ರೂ.ಗಳ ವೆಚ್ಚ ಆಗಲಿದೆ. ನೋಂದಣಿ ಆಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

 

2023-24ನೇ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಏಳು ಜಿಲ್ಲೆಗಳಲ್ಲಿ NGOಗಳ ಸಹಯೋಗದೊಂದಿಗೆ ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಸೇವಾ ವಲಯದಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.4 ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿಯನ್ನು ಎರಡು ಕೋಟಿ ರೂ.ಗಳಿಂದ ಐದು ಕೋಟಿ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಬಜೆಟ್ ಮಂಡನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :ಎಲ್ಲಾ ಓಕೆ, ಡಿಸಿಎಂ ಡಿಕೆಶಿ ಇಲಾಖೆಗೇ ಹುಲಿಯಾ ಹಣ ಇಟ್ಟಿಲ್ಲ ಯಾಕೆ ?