Home ಬೆಂಗಳೂರು ಭಾರತ ತಂಡದ ಖೋ ಖೋ ಆಟಗಾರ ಕರ್ನಾಟಕ ರತ್ನ ತೀರ್ಥಹಳ್ಳಿಯ ವಿನಯ್’ ಇನ್ನಿಲ್ಲ

ಭಾರತ ತಂಡದ ಖೋ ಖೋ ಆಟಗಾರ ಕರ್ನಾಟಕ ರತ್ನ ತೀರ್ಥಹಳ್ಳಿಯ ವಿನಯ್’ ಇನ್ನಿಲ್ಲ

Hindu neighbor gifts plot of land

Hindu neighbour gifts land to Muslim journalist

ಶಿವಮೊಗ್ಗ : ಖೋ ಖೋ ಆಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ತೀರ್ಥಹಳ್ಳಿಯ ಕ್ರೀಡಾ ಸಾಧಕ ವಿನಯ್ (33) ಮೆದುಳು ಜ್ವರದಿಂದ ತಡರಾತ್ರಿ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕಳೆದ ಕೆಲದಿನಗಳಿಂದ ಮೆದುಳು ಜ್ವರದಿಂದ ಬಳಲುತ್ತಿದ್ದ ವಿನಯ್ ರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ. ವಿನಯ್, ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರ ಮಟ್ಟವನ್ನು ಖೋ ಖೋ ಕ್ರೀಡೆಯಲ್ಲಿ ಪ್ರತಿನಿಧಿಸಿದ್ದರು. ವಿನಯ್ ಅವರ ಸಾಧನೆಗೆ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು.