ಸೋಮವಾರ, 26 ಅಕ್ಟೋಬರ್ 2026
Trending

BREAKING NEWS ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ, 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ !

ಬೆಂಗಳೂರು : ಮತ್ತೆ ಕರ್ನಾಟಕದಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕಳೆದ ಕೆಲವು ವಾರಗಳಿಂದ ಬಿಡುವು ಪಡೆದುಕೊಂಡಿದ್ದ ಮಳೆರಾಯ ಮತ್ತೆ ತಂಪರೆಯಲ್ಲಿದ್ದಾನೆ.

Sponsored

ನಮ್ಮ ರಾಜ್ಯದ ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮೈಸೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅದರಲ್ಲೂ ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಳಲ್ಲಿ ಭಾರೀ ಮಳೆಯಾಗಲಿದೆಯಂತೆ. ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಅಬ್ಬರ ಇನ್ನೂ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ.

ಅಲ್ಲದೆ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿಯೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಮಧ್ಯ ಭಾಗದ ಜಿಲ್ಲೆಗಳಲ್ಲಿರುವ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.