Home Karnataka State Politics Updates ‘SC-ST’ ಪಂಗಡದವರಿಗೆ ರಾಜ್ಯಸರಕಾರದಿಂದ ಭರ್ಜರಿ ಸಿಹಿಸುದ್ದಿ : 75 ಯುನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ

‘SC-ST’ ಪಂಗಡದವರಿಗೆ ರಾಜ್ಯಸರಕಾರದಿಂದ ಭರ್ಜರಿ ಸಿಹಿಸುದ್ದಿ : 75 ಯುನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ

Hindu neighbor gifts plot of land

Hindu neighbour gifts land to Muslim journalist

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯುನಿಟ್ ತನಕ ಉಚಿತ ವಿದ್ಯುತ್, ಸ್ವಯಂ ಉದ್ಯೋಗಕ್ಕೆ ನೀಡುವ ಸಹಾಯಧನವನ್ನು 50 ಸಾವಿರ ರೂ.ನಿಂದ 1 ಲಕ್ಷ ರೂ.ವರೆಗೆ ಹೆಚ್ಚಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ಭರ್ಜರಿ ಸಿಹಿಸುದ್ದಿಯೊಂದನ್ನು ರಾಜ್ಯ ಸರಕಾರ ನೀಡಿದೆ.

ವಿಧಾನಸೌಧದದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಅಂಬೇಡ್ಕರರ 131 ನೇ ಜನ್ಮದಿನಾಚರಣೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಸ್ಪೂರ್ಥಿ ಭವನ ಕಲ್ಯಾಣ ಶಂಕುಸ್ಥಾಪನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಪರಭಾರೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಸುಪ್ರೀಂಕೋರ್ಟ್ ಆದೇಶಿಸಿದೆ. ರಾಜ್ಯದಲ್ಲೂ ಈ ಕಾಯ್ದೆ ಜಾರಿಗೆ ತರಲು ಸರ್ಕಾರ ಸಿದ್ಧವಿದೆ ಎಂದರು.

ಇನ್ನು ಪೌರಕಾರ್ಮಿಕರಿಗೆ ಸರ್ಕಾರ ವಿಶೇಷ ಅನುದಾನ ಒದಗಿಸಲಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಸರ್ವರಿಗೂ ಆರೋಗ್ಯ ಕಾರ್ಡ್ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.