Home ಬೆಂಗಳೂರು National Flag Suvarna Soudha: ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

National Flag Suvarna Soudha: ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

Hindu neighbor gifts plot of land

Hindu neighbour gifts land to Muslim journalist

National Flag Suvarna Soudha: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು (ಡಿ.9) ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಧ್ವಜವನ್ನು ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಿಸಿದ್ದಾರೆ.