Home ಬೆಂಗಳೂರು ಪಬ್ಲಿಕ್ ಟಿವಿಯ ಎಚ್ . ಆರ್. ರಂಗನಾಥ್ ಹಾಗು ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನುರಹಿತ...

ಪಬ್ಲಿಕ್ ಟಿವಿಯ ಎಚ್ . ಆರ್. ರಂಗನಾಥ್ ಹಾಗು ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನುರಹಿತ ಕೇಸ್ ದಾಖಲು !

Hindu neighbor gifts plot of land

Hindu neighbour gifts land to Muslim journalist

ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್ . ಆರ್. ರಂಗನಾಥ್ ಹಾಗು ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಲು ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ಫೆಬ್ರವರಿ 3ರಂದು ಪಬ್ಲಿಕ್ ಟಿವಿ ವಾಹಿನಿಯು ‘ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ ಬಿಗ್ ಬುಲೆಟಿನ್’ ಕಾರ್ಯಕ್ರಮದಲ್ಲಿ ವಾಹಿನಿಯ ಮುಖ್ಯಸ್ಥ ಎಚ್ ಆರ್. ರಂಗನಾಥ್ ಹಾಗು ನಿರೂಪಕ ಅರುಣ್ ಬಡಿಗೇರ್ ‘ಭಾರತ ಸೃಷ್ಟಿಯಾಗಿದ್ದೇ ಹಿಂದೂ ರಾಷ್ಟ್ರದ ಆಧಾರದಲ್ಲಿ’ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯು ಪ್ರಜಾ ಪ್ರಭುತ್ವ ರಾಷ್ಟ್ರದಲ್ಲಿ ಎರಡು ಸಮುದಾಯಗಳ ಮಧ್ಯೆ ವೈರತ್ವ ನಿರ್ಮಾಣ ಉದ್ದೇಶದಿಂದ ಕೂಡಿದೆ ಎಂದು ದೂರು ನೀಡಲಾಗಿದೆ.

ಈ ಹೇಳಿಕೆ ಮೂಲಕ ಅವರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ. ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.  ಬಂದೇನವಾಜ್ ಗೋಗಿ ಅವರು ಶಹಾಪುರದ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.

ನ್ಯಾಯಾಲಯವು ಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಕಲಂ 153(ಬಿ) 505(1)(ಬಿ)(ಸಿ) ಮತ್ತು 505(2) ಐಪಿಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.