Home ಬೆಂಗಳೂರು Bengaluru : ವಾರ್ಡನ್ ಜೊತೆ ಡಿಗ್ರಿ, ಪಿಜಿ ಹುಡುಗಿಯರಿಗೆ ಅಕ್ರಮ ಸಂಬಂಧದ ಆರೋಪ – ರಾತ್ರೋರಾತ್ರಿ...

Bengaluru : ವಾರ್ಡನ್ ಜೊತೆ ಡಿಗ್ರಿ, ಪಿಜಿ ಹುಡುಗಿಯರಿಗೆ ಅಕ್ರಮ ಸಂಬಂಧದ ಆರೋಪ – ರಾತ್ರೋರಾತ್ರಿ ಬೀದಿಗಿಳಿದ ಹಾಸ್ಟೆಲ್ ವಿದ್ಯಾರ್ಥಿನಿಯರು!!

Hindu neighbor gifts plot of land

Hindu neighbour gifts land to Muslim journalist

Bengaluru : ಬೆಂಗಳೂರು ವಿಶ್ವವಿದ್ಯಾಲಯದ ಲೇಡೀಸ್ ಹಾಸ್ಟೆಲ್ ನಲ್ಲಿ ವಾರ್ಡನ್ ಜೊತೆ ವಿದ್ಯಾರ್ಥಿನಿಯರಿಗೆ ಅಕ್ರಮ ಸಂಬಂಧವಿದೆ ಎಂಬ ಅಪಪ್ರಚಾರ ನಡೆಸಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯವರೆಲ್ಲರೂ ರಾತ್ರೋರಾತ್ರಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಹಾಸ್ಟೆಲ್ ನಲ್ಲಿ ಮೂಲಸೌಕರ್ಯ ಕಲ್ಪಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಇದನ್ನು ಪ್ರಶ್ನೆಸಿದ್ದಕ್ಕೆ ಕೆಲವು ಕಿಡಿಗೇಡಿಗಳು ಹಾಸ್ಟೆಲ್ ವಿದ್ಯಾರ್ಥಿನಿಯರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ವಾರ್ಡನ್ ವಿದ್ಯಾರ್ಥಿನಿಯರ ನಡುವೆ ಅಕ್ರಮ ಸಂಬಂಧ ಎಂದು ಹಾಸ್ಟೆಲ್ ಸೂಪರ್ ವೈಸರ್ ಈ ರೀತಿ ವದಂತಿ ಹಬ್ಬಿಸುತ್ತಿದ್ದಾರೆ. ದುರುದ್ದೇಶದಿಂದ ತಮ್ಮ ಬಗ್ಗೆ ಮಾನಹಾನಿ ಮಾಡುತ್ತಿರುವುದಾಗಿ ಆರೋಪಿಸಲಾಗಿದೆ. ಈ ಹಿನ್ನಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.

ಈಶಾನ್ಯ ರಾಜ್ಯದ ವಿದ್ಯಾರ್ಥಿನಿಯರು ಹಾಸ್ಟೆಲ್ ಬಳಿ ರಸ್ತೆ ಪಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಿ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ. ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.