Home latest ಉದ್ಯಾನವನವೊಂದರಲ್ಲಿ ಪ್ರೀತಿಯಲ್ಲಿ ಮುಳುಗಿದ್ದ ಪ್ರೇಮಿಗಳು ಚುಂಬಿಸುವ ವೀಡಿಯೋ ವೈರಲ್!! ಸಾರ್ವಜನಿಕರಿಂದ ಭಾರೀ ಆಕ್ರೋಶ

ಉದ್ಯಾನವನವೊಂದರಲ್ಲಿ ಪ್ರೀತಿಯಲ್ಲಿ ಮುಳುಗಿದ್ದ ಪ್ರೇಮಿಗಳು ಚುಂಬಿಸುವ ವೀಡಿಯೋ ವೈರಲ್!! ಸಾರ್ವಜನಿಕರಿಂದ ಭಾರೀ ಆಕ್ರೋಶ

Hindu neighbor gifts plot of land

Hindu neighbour gifts land to Muslim journalist

ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಪ್ರೀತಿಯಲ್ಲಿ ಮುಳುಗಿ ಹೋಗಿದ್ದ ಯುವ ಜೋಡಿಯು ಪರಸ್ಪರ ಚುಂಬಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುವುದರೊಂದಿಗೆ ನೆಟ್ಟಿಗರ ಆಕ್ರೋಶಕ್ಕೂ ಕಾರಣವಾಗಿದೆ.

ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಉದ್ಯಾನವನದಲ್ಲಿ ಇಂತಹ ಘಟನೆಯೊಂದು ನಡೆದಿದ್ದು, ಪ್ರೇಮಿಗಳಿಬ್ಬರು ಪ್ರೀತಿಯ ಕಡಲಲ್ಲಿ ಮುಳುಗಿ ಹೋಗಿದ್ದಲ್ಲದೆ, ತಮ್ಮನ್ನು ತಾವು ಮರೆತು ಸಾರ್ವಜನಿಕವಾಗಿ ಚುಂಬಿಸುವ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದ್ದು, ಕೆಲ ಹೊತ್ತಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಇಂತಹ ವರ್ತನೆಯಿಂದ ಸಾರ್ವಜನಿಕರಿಗೆ ಮುಜುಗರ ಉಂಟಾಗಿದ್ದು, ಹಾಡಹಗಲೇ ಇಂತಹ ಘಟನೆಗಳು ನಡೆಯುವ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ ಎತ್ತಿತೋರುವಂತಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.