Water bottle: ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಿಎಂ
Water bottle: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು (water bottle) ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
Sponsoredಈ ಕುರಿತಾಗಿ ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿತ್ತು. ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಮತ್ತು ಮುಖ್ಯಮಂತ್ರಿಗಳ, ಸಚಿವರುಗಳ ಸಭೆಗಳಲ್ಲಿ ಸರ್ಕಾರದ ಎಲ್ಲಾ ಸಭೆ – ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದಾರೆ.




