# Mysore: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಮಗು ಧಾರುಣ ಸಾವು!

- Link: https://hosakannada.com/%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf/mysore-2-year-old-child-dharuna-dies-after-falling-into-a-pot-of-hot-water/
- Published: 2025-12-20T19:12:51+00:00
- Author: ಹೊಸಕನ್ನಡ ನ್ಯೂಸ್

Mysore: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು 
ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಮೈಸೂರಲ್ಲಿ ನಡೆದಿದೆ.

Sponsored

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು
ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ.
ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ
ವೇದಾ ಬಿಸಿನೀರಿನ ಪಾತ್ರೆಗೆ ಬಿದ್ದಿದ್ದಾಳೆ. ತಾಯಿ ಬಿಸಿ ನೀರಿನ ಪಾತ್ರೆಗೆ ಬಿದ್ದ ವೇದಾಳನ್ನು ರಕ್ಷಿಸಿ
ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಇದೀಗ ಪೋಷಕರ
ಆಕ್ರಂದನ ಮುಗಿಲು ಮುಟ್ಟಿದೆ.

Advertisement

Advertisement

Advertisement
