ಉಜಿರೆಯಲ್ಲಿ ಪೇಜಾವರ ಶ್ರೀಗಳಿಗೆ ನುಡಿ ನಮನ : ಕಲ್ಲಡ್ಕ ಪ್ರಭಾಕರ ಭಟ್ ಭಾಗಿ

ವಿಶ್ವ ಹಿಂದೂ ಪರಿಷತ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಉಜಿರೆ ಇವರ ವತಿಯಿಂದ ಅಗಲಿದ ವಿಶ್ವ ಸಂತ ಪೇಜಾವರ ಮಠದ ಹಿರಿಯ ಸ್ವಾಮೀಜಿ ಶ್ರೀ ವಿಶ್ವೇಶ್ವರತೀರ್ಥ ಶ್ರೀಗಳಿಗೆ ಉಜಿರೆಯ ಜನಾರ್ದನ ದೇವಸ್ಥಾನದ ಎದುರಿನ ಶ್ರೀಶಾರದಾ ಮಂಟಪದಲ್ಲಿ ಡಿಸೆಂಬರ್ 31ರಂದು ನುಡಿ ನಮನ ಸಲ್ಲಿಸಲಾಯಿತು.
ಆರೆಸ್ಸೆಸ್ ಪ್ರಮುಖ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು ಪೇಜಾವರ ಶ್ರೀಗಳ ಧಾರ್ಮಿಕ ಶೈಕ್ಷಣಿಕ ಸಾಮಾಜಿಕ ಸೇವೆ ಮತ್ತು ಮಾನವೀಯ ಗುಣಗಳನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ದೇಶದ ಭದ್ರತೆಗಾಗಿ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಮಾತನಾಡಿದ ಅವರು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನ ಮಾಜಿ ರಾಜ್ಯಾಧ್ಯಕ್ಷ ಚ. ನ. ಶಂಕರ್ ಅವರ ಕೃತಿ ‘ಪೌರತ್ವ ತಿದ್ದುಪಡಿ ಕಾಯ್ದೆ -2019 ‘ ಬಿಡುಗಡೆಗೊಳಿಸಿ ಮಾತನಾಡಿದರು.
ಪೌರತ್ವ ತಿದ್ದುಪಡಿ ಕಾಯ್ದೆ ಎನ್ನು ಬೆಂಬಲಿಸಿ ಮಂಗಳೂರಿನಲ್ಲಿ ಸದ್ಯದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಬೆಂಬಲಿಸಬೇಕೆಂದು ಈ ಸಂದರ್ಭದಲ್ಲಿ ಕೇಳಿಕೊಂಡರು.
ಸಭೆಯಲ್ಲಿ ಆರೆಸ್ಸೆಸ್ಸಿನ ಚಾಲಕ ಕೃಷ್ಣಭಟ್ , ಕೊಕ್ಕಡ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೆಳ್ತಂಗಡಿ ತಾಲೂಕಿನ ಇನ್ನೂರಕ್ಕೂ ಅಧಿಕ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಾ. ರವಿ ಮಂಡ್ಯ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

error: Content is protected !!
Scroll to Top
%d bloggers like this: