ಸವಣೂರು | ಗ್ರಾ.ಪಂ.ನ ಸಭಾಂಗಣ,ಅಭಿವೃದ್ದಿ ಕಾಮಗಾರಿ ಉದ್ಘಾಟನೆಯ ಆಮಂತ್ರಣ ಬಿಡುಗಡೆ

ಸವಣೂರು : ಜ.18 ರಂದು ನಡೆಯಲಿರುವ ಸವಣೂರು ಗ್ರಾಮ ಪಂಚಾಯತ್‌‌ನ ನೂತನ ಕುಮಾರಧಾರ ಸಭಾಂಗಣ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ  ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಹಿರಿಯರಾದ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಪಿ.ಡಿ.ಗಂಗಾಧರ ರೈ ದೇವಸ್ಯ ಆಮಂತ್ರಣ ಬಿಡುಗಡೆಗೊಳಿಸಿದರು.

ಈ ಸಂಸರ್ಭ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ., ಉಪಾಧ್ಯಕ್ಷ ರವಿಕುಮಾರ್, ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ,ಸದಸ್ಯರಾದ ಗಿರಿಶಂಕರ ಸುಲಾಯ, ಸತೀಶ್ ಬಲ್ಯಾಯ,ರಾಜೀವಿ ಶೆಟ್ಟಿ, ಪ್ರಕಾಶ್ ಕುದ್ಮನಮಜಲು, ಮಾಜಿ ಅಧ್ಯಕ್ಷೆ ಸುಧಾ ಎಸ್ ರೈ, ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸವಣೂರು ವರ್ತಕರ ಸಂಘದ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಸವಣೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ವೆಂಕಪ್ಪ ಶೆಟ್ಟಿ, ಪುತ್ತೂರು ಹಿಂ.ಜಾ.ವೇ.ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು, ಪಾಲ್ತಾಡಿ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಧಾಕರ ರೈ ಕುಂಜಾಡಿ,ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

Leave A Reply

Your email address will not be published.