ಅಮಿತ್ ಷಾ ಮಂಗಳೂರಿಗೆ ಬರುವ ಹಿನ್ನೆಲೆ । ಪುತ್ತೂರಿನಲ್ಲಿ ಪೌರತ್ವ ಕಾಯ್ದೆಯ ಪೂರ್ವಭಾವಿ ಸಭೆ

ಇದೀಗ ಪುತ್ತೂರು ತಾಲೂಕಿನಲ್ಲಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಜನಜಾಗೃತಿ ಅಭಿಯಾನದ ಅಂಗವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಗಾರ ಕಾರ್ಯಕ್ರಮ ಮತ್ತು ಇದೇ ತಿಂಗಳ 19 ರಂದು ಕೇಂದ್ರ ಸರ್ಕಾರದ ಗೃಹ ಸಚಿವರಾದ ಶ್ರೀ ಅಮಿತ್ ಷಾ ಅವರು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯು ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.

ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ19 ರಂದು ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ (CAA) ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ಇದಾಗಿದ್ದು, ಸಭೆಯಲ್ಲಿ ಮುಂದಿನ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು.


Ad Widget

Ad Widget

Ad Widget

ಇವತ್ತಿನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ದ.ಕ. ಸಂಸದರೂ ಆಗಿರುವ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು, ಮಾಜಿ ಶಾಸಕರಾದ ಶ್ರೀಮತಿ ಮಲ್ಲಿಕಾ ಪ್ರಸಾದ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಚನಿಲ ತಿಮ್ಮಪ್ಪ ಶೆಟ್ಟಿ, ನಿಯೋಜಿತ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಶ್ರೀ ಜಗನ್ನೀವಾಸ ರಾವ್, ವಿಭಾಗ ಸಂಪರ್ಕ ಪ್ರಮುಖ್ ಶ್ರೀ ರವೀಂದ್ರ ದಕ್ಷ, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷರಾದ ಶ್ರೀ ಡಾ.ಪ್ರಸನ್ನ, ಬಜರಂಗದಳ ಪ್ರಾಂತ ಸಹಸಂಚಾಲಕರಾದ ಶ್ರೀ ಮುರಳಿ ಕೃಷ್ಣ ಹಸಂತಡ್ಕ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಮದಾಸ್ ಹಾರಾಡಿ, ಶ್ರೀಮತಿ ಗೌರಿ ಬನ್ನೂರು, ಶಂಭು ಭಟ್, ಬಿಜೆಪಿ ಪ್ರಮುಖರು, ಮತ್ತು ನೂರಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!
Scroll to Top
%d bloggers like this: