Breaking : ಪೌರತ್ವ ತಿದ್ದುಪಡಿ ಕಾಯ್ದೆತಕ್ಷಣದಿಂದ ಜಾರಿ । ಗಜೆಟ್ ಅಧಿಸೂಚನೆಯಲ್ಲಿ ಪ್ರಕಟಣೆ

Share the Article

ನವದೆಹಲಿ : ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ CAA ಯು ಜನವರಿ 10 ರಿಂದ ಜಾರಿಗೆ ಬಂದಿದೆ ಎಂದು ಕೇಂದ್ರವು ಶುಕ್ರವಾರ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಿದೆ.

ಕೇಂದ್ರ ಗೃಹ ಸಚಿವಾಲಯವು 2014 ಕ್ಕಿಂತ ಹಿಂದೆ ಭಾರತಕ್ಕೆ ಬಂದಿರುವ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ನೀಡಲಾಗುವ ಕಾಯ್ದೆತಕ್ಷಣದಿಂದ ಜಾರಿಗೆ ಬರಲಿದೆ ಎಂದು ಹೇಳಿದೆ.

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ2019 ಕ್ಕೆ ಪರ ವಿರೋಧಗಳು ಪ್ರಬಲವಾಗಿ ನಡೆಯುತ್ತಿರುವ ಈ ಸಂಧರ್ಭದಲ್ಲಿ, ಮುಂದೆ ಅದಕ್ಕೆ ದೇಶ ಹೇಗೆ ಸ್ಪಂದಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Leave A Reply

Your email address will not be published.