ಕನಕಮಜಲು ಯುವಕ ಮಂಡಲಕ್ಕೆ ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ

ಮಂಗಳೂರಿನ ಪುರಭವನದಲ್ಲಿ ಜ.14 ರಂದು ನಡೆದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಯುವಕೇಂದ್ರ ಮಂಗಳೂರು ಹಾಗು ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಯುವ ಜನ ಒಕ್ಕೂಟ, ದ.ಕ. ಜಿಲ್ಲೆ ಇದರ ಆಶ್ರಯದಲ್ಲಿ ದಿವ್ಯ ಚೇತನ ಸ್ವಾಮಿ ವಿವೇಕಾನಂದರ 157 ನೇ ಜನ್ಮದಿನದ ಹಾಗು ಜಿಲ್ಲಾ ಯುವ ಸಮಾವೇಶ ಹಾಗೂ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ 2018-19 ನೇ ಸಾಲಿನ ಕಾರ್ಯ ಚಟುವಟಿಕೆಯನ್ನು ಗಮನಿಸಿ ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಎಂಬ ಪ್ರಶಸ್ತಿ ಯನ್ನು ಕನಕಮಜಲು ಯುವಕ ಮಂಡಲ ತನ್ನದಾಗಿಸಿಕೊಂಡಿದೆ.