ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಸವಣೂರು : ಫೆ. 7 ಮತ್ತು 8 ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಜ.14 ರಂದು ದೇವಳದ ವಠಾರದಲ್ಲಿ ಜರಗಿತು.

 

ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲಾಯ ಸವಣೂರುರವರು ಪೂಜಾವಿಧಿ ವಿಧಾನವನ್ನು ನೇರವೇರಿಸಿದರು.

ಆಡಳಿತ ಸಮಿತಿ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಉತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಶಿವರಾಮ ರೈ ಸವಣೂರುಗುತ್ತು, ಅರಿಯಡ್ಕ ಮಹಿಳ್‌ನಾಥ್ ಶೆಟ್ಟಿ ಸಾಂತ್ಯ, ಉತ್ಸವ ಸಮಿತಿಯ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಉಪಾಧ್ಯಕ್ಷ ಬೆಳಿಯಪ್ಪ ಗೌಡ ಚೌಕಿಮಠ, ಕಾರ್‍ಯದರ್ಶಿ ದಯಾನಂದ ಮಾಲೆತ್ತಾರು, ಶ್ರೀ ವಿಷ್ಣು ಸೇವಾ ಸಮಿತಿಯ ಅಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು, ಉತ್ಸವ ಸಮಿತಿಯ ಪದಾಧಿಕಾರಿಗಳಾದ ಭಾಸ್ಕರ್ ಗೌಡ ಅಡೀಲು, ಚೇತನ್ ಕುಮಾರ್ ಕೋಡಿಬೈಲು, ವಿಠಲ ರೈ ನೆಕ್ಕರೆ ಹಾಗೂ ಸವಣೂರುಗುತ್ತು ಮನೆತನದವರು ಮತ್ತು ಊರ-ಪರವೂರ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.

Leave A Reply

Your email address will not be published.