ಕೋಡಿ೦ಬಾಳ ಆಸಿಡ್ ಆರೋಪಿಗೆ ಕಠಿಣ ಶಿಕ್ಷೆಆಗಲಿ, ಸಂತ್ರಸ್ತೆಯ ಹೆಣ್ಣು ಮಕ್ಕಳ ಶಿಕ್ಷಣದ ಪೂರ್ತಿ ವೆಚ್ಚವನ್ನು ಸರ್ಕಾರವೇ ಭರಿಸಬೇಕು । ಬಿಜೆಪಿ ಮಹಿಳಾ ಮೋರ್ಚಾ

ಕಡಬ : ಕೋಡಿ೦ಬಾಳ ಆಸಿಡ್ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಸಂತ್ರಸ್ತರ ಸಂಪೂರ್ಣ ವೈದ್ಯಕೀಯ ವೆಚ್ಚ ಸರ್ಕಾರ ಭರಿಸಬೇಕು ಎಂದು ಸರ್ಕಾರವನ್ನು ಇಂದು ಒತ್ತಾಯಿಸಲಾಯಿತು.

ಅಲ್ಲದೆ ಸಂತ್ರಸ್ತೆಯ ಮೂವರು ಹೆಣ್ಣು ಮಕ್ಕಳ ಶಿಕ್ಷಣದ ಪೂರ್ತಿ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಕಡಬ ತಹಸೀಲ್ದಾರ್ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ ನಡೆಯಿತು.

Leave A Reply

Your email address will not be published.