ರಾಷ್ಟ್ರೀಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ : ಮಾರ್ಚ್ 20, 21, 22 ರಂದು ಪುತ್ತೂರಿನಲ್ಲಿ

ಪುತ್ತೂರು : ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್ ಹಾಗೂ ಸೆವೆನ್ ಡೈಮಂಡ್ಸ್ ಯೂತ್ ಕ್ಲಬ್, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ
-ರಾಷ್ಟ್ರೀಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ.

 

ದಿನಾಂಕ 2020 ರ ಮಾರ್ಚ್ 20, 21, 22, ಶುಕ್ರವಾರ, ಶನಿವಾರ, ಆದಿತ್ಯವಾರ ದಂದು ಪುತ್ತೂರಿನ ವಿವೇಕಾನಂದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ, ಸಂಜೆ ಗಂಟೆ 6:00 ರಿಂದ ನಡೆಯಲಿವೆ ಎಂದು ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್ ನ ಗೌರವಾಧ್ಯಕ್ಷರಾದ ಸತೀಶ್ ಬಿ. ಎಸ್. ಇಂದು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆಹ್ವಾನಿತ ತಂಡಗಳ, ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಕೇರಳ, ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ, ರಾಜ್ಯಗಳಿಂದ ಸ್ಪರ್ದಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಂದ್ಯಾಟ ಸಮಿತಿ ಯ ಅಧ್ಯಕ್ಷರಾದ ಬೇಬಿ ಜಾನ್, ಕಾರ್ಯದರ್ಶಿ ಮೋನಪ್ಪ ಎಮ್, ಖಜಾಂಜಿ ಪ್ರದೀಪ್ ಪಿ. ಆರ್, ಸದಸ್ಯರಾದ ಸಂಜೀವ ಉಪಸ್ಥಿತರಿದ್ದರು.

Leave A Reply

Your email address will not be published.