

ಕಡಬ :ಪ್ರತಿಷ್ಠಿತ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಮಂಗಳವಾರ ನಡೆಯಿತು.
ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ರಮೇಶ್ ಕಲ್ಪುರೆ ,ಉಪಾಧ್ಯಕ್ಷ ರಾಗಿ ಗಣೇಶ್ ಮೂಜೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಹಕಾರಿ ಸಂಘಗಳ ಸಹಾಯಕ ನಿಬಂಧಕರ ಕಛೇರಿಯ ಅಧೀಕ್ಷಕ ಬಿ.ನಾಗೇಂದ್ರ ಚುನಾವಣಾಧಿಕಾರಿಯಾಗಿದ್ದರು. ಈ ವೇಳೆ ಸಿಎ ಬ್ಯಾಂಕ್ ನಿರ್ದೇಶಕರುಗಳು, ಪ್ರಮುಖರು ಉಪಸ್ಥಿತರಿದ್ದರು.
