ಇದ್ಪಾಡಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ, ಮಾರಿ ಪೂಜೆ

ಇದ್ಪಾಡಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ, ಮಾರಿ ಪೂಜೆ

 

ಪುತ್ತೂರು: ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಶ್ರೀ ಶಿರಾಡಿ ದೈವಸ್ಥಾನ ಇದ್ಪಾಡಿ ಮಂಜಕೊಟ್ಯ ಇದರ ವಾರ್ಷಿಕ ಮಾರಿ ನೇಮೋತ್ಸವ ವಿಜ್ರಂಬಣೆಯಿಂದ ನಡೆಯಿತು.

ಶನಿವಾರ ಸಂಜೆ ವೇದಮೂರ್ತಿ ಕೆ.ಕೃಷ್ಣಕುಮಾರ್ ಉಪಾಧ್ಯಾಯ ಪಟ್ಲಮೂಲೆ ಇವರ ನೇತೃತ್ವದಲ್ಲಿ ಶ್ರೀ ದುರ್ಗಾಪೂಜೆ ಬಳಿಕ ಸಭಾ ಕಾರ್ಯಕ್ರಮ, ಸನ್ಮಾನ ನಡೆಯಿತು. ಶ್ರೀ ಶಿರಾಡಿ ಭಕ್ತವೃಂದದ ಅಧ್ಯಕ್ಷ ಜಗದೀಶ್ ಅಮೀನ್ ಮಾರುತಿಪುರರವರ ಸಭಾಧ್ಯಕ್ಷತೆಯಲ್ಲಿ ನಡೆದ ಸಭೆ ಯಲ್ಲಿ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಅವರು ದುರ್ಗಾಪೂಜೆಯ ಮಹತ್ವ ಎಂಬ ವಿಷಯದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು.

ಶಿರಾಡಿ ದೈವ ಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕಡಮಜಲು ಸುಭಾಸ್ ರೈ ,ಪ್ರಧಾನ ಕಾರ್ಯದರ್ಶಿ ಸುಧಾಕರ್ ರೈ ಮುಂಡಾಲ,ಸಂಪ್ಯ ಮಹಾ ವಿಷ್ಣುಮೂರ್ತಿ ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್ ರವೀಂದ್ರ ಶೆಟ್ಟಿ ನುಳಿಯಾಲು ಮುಂತಾದವರನ್ನು ಸನ್ಮಾನಿಸಲಾಯಿತು

ರವಿವಾರ ನೇಮೋತ್ಸವ ನಡೆಯಿತು.

Leave A Reply

Your email address will not be published.