ಕರಿಂಜೆ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ

ಕರಿಂಜೆ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ


Ad Widget

Ad Widget

Ad Widget

Ad Widget
Ad Widget

Ad Widget

ಪುತ್ತೂರು: ಮೂಡಬಿದಿರೆ ಕರಿಂಜಿ ಶ್ರೀ ಲಕ್ಷ್ಮೀನಾರಾಯಣ ವೀರಾಂಜನೇಯ ಸ್ವಾಮಿ ಕ್ಷೇತ್ರದಲ್ಲಿ ನಡೆಯಲಿರುವ ಬ್ರಹ್ಮಕಲಶಾಭಿಷೇಕ ಹಾಗೂ ಅಷ್ಟಪವಿತ್ರ ನಾಗಮಂಡಲ ಕಾರ್ಯಕ್ರಮದ ಸಲುವಾಗಿ ಫೆ.9 ರಂದು ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಿತು.


Ad Widget

ಮೂಡಬಿದಿರೆಯ ಕರಿಂಜೆ ಓಂ ಶ್ರೀ ಶಕ್ತಿಗುರುಮಠ ಶ್ರೀ ಜಗದ್ಗುರು ರಾಘವೇಂದ್ರ ಪೀಠದಲ್ಲಿ ಫೆ 9 ರಿಂದ 19 ರ ವರೆಗೆ ನಡೆಯಲಿರುವ ನೂತನ ಗರ್ಭಗುಡಿಯಲ್ಲಿ ಶ್ರೀ ದೇವರ ಪುನರ್ ಪ್ರತಿಷ್ಠೆ ಅಷ್ಟಬಂಧ ಅಷ್ಟೋತ್ತರ ಸಹಸ್ರ ಬ್ರಹ್ಮಕಲಶಾಭಿಷೇಕ ಅಷ್ಟಪವಿತ್ರ ನಾಗಮಂಡಲ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಿಂದ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆಗೆ ಶಾಸಕ ಸಂಜೀವ ಮಠಂದೂರು ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕರಿಂಜೆ ಬ್ರಹ್ಮಕಲಶೋತ್ಸವದ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷರಾದ ಕೆದಂಬಾಡಿ ಗುತ್ತು ಸೀತಾರಾಮ ರೈ, ಸಮಿತಿಯ ಕಾರ್ಯದರ್ಶಿಯಾಗಿರುವ ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಮುರಳಿಕೃಷ್ಣ ಹಸಂತ್ತಡ್ಕ, ತಾ.ಪಂ ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ವಿಶ್ವಹಿಂದೂ ಪರಿಷತ್ ಜಿಲ್ಲಾ ಗೌರವಾಧ್ಯಕ್ಷ ಯು ಪೂವಪ್ಪ, ಪ್ರಖಂಡ ಅಧ್ಯಕ್ಷ ಜನಾರ್ದನ ಬೆಟ್ಟ, ಜಯಂತ್ ಕುಂಜೂರುಪಂಜ, ಅನಿಲ್ ಗೌಡ ತೆಂಕಿಲ, ಬನ್ನೂರು ಗ್ರಾ.ಪಂ ಸದಸ್ಯ ಪ್ರಭು, ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ತಾಲೂಕು ಕಾರ್ಯದರ್ಶಿ ಚಿನ್ಮಯ್ ರೈ, ನಗರ ಅಧ್ಯಕ್ಷ ಕೃಷ್ಣಪ್ರಸಾದ್ ಶೆಟ್ಟಿ, ಬಜರಂಗದಳದ ತಾಲೂಕು ಸಂಚಾಲಕ ಹರೀಶ್ ದೋಳ್ಪಾಡಿ, ಕೃಷ್ಣಕುಮಾರ್ ರೈ ಕೆದಂಬಾಡಿ, ಶಶಿಕಾಂತ್ ಕೋರ್ಟ್‌ರಸ್ತೆ, ಹರಿಶ್ಚಂದ್ರ ಪಡುಮಲೆ, ಅವಿನಾಶ್ ಪುರುಷರಕಟ್ಟೆ, ಅಮರ್ ರೈ ತಿಂಗಳಾಡಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!
Scroll to Top
%d bloggers like this: