ಬೆಳ್ಳಾರೆ: ಅಟ್ಟದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಸುಳ್ಯ: ಮನೆಯ ಅಟ್ಟದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.

 

ಬೆಳ್ಳಾರೆ ಗ್ರಾಮದ ಬೊಳಿಯಮೂಲೆ ಎಂಬಲ್ಲಿ ಮುತ್ತುಲಿಂಗಂ ಎಂಬವರು ಫೆ. 5 ರಂದು ಮನೆಯ ಅಟ್ಟಕ್ಕೆ ಹತ್ತಿದ್ದು ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಏಣಿಯಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.

ಗಾಯಗೊಂಡ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು .

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.