ಮರಕ್ಕೆ ಬೈಕ್ ಡಿಕ್ಕಿ: ಓರ್ವ ಸಾವು,ಇನ್ನೋರ್ವ ಗಂಭೀರ

ಕುಷ್ಟಗಿ: ನಿಯಂತ್ರಣ ತಪ್ಪಿದ ಹಿನ್ನೆಲೆ ಮರಕ್ಕೆ ಬೈಕ್​ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪುರ ಬಳಿ ಈ ಅಪಘಾತ ನಡೆದಿದೆ.

 

ಜುಮಲಾಪುರ ಮುದೇನೂರ ರಸ್ತೆಯಲ್ಲಿ ಈ ಅವಘಡ ನಡೆದಿದ್ದು, ಸ್ಥಳದಲ್ಲೇ ಮೃತಪಟ್ಟವರನ್ನು ಯಂಕಪ್ಪ ದಾಸರ್ (26) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಶಿವಗ್ಯಾನಪ್ಪ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರೂ ಕೊಪ್ಪಳ ಜಿಲ್ಲೆಯ ಲಿಂಗಸಗೂರು ತಾಲೂಕಿನ ಬ್ಯಾಲಿಹಾಳ ಗ್ರಾಮದವರು. ತಾವರಗೇರಾ ಪೊಲೀಸ್ ಠಾಣೆ ಯಲ್ಲಿ‌ ಪ್ರಕರಣ ದಾಖಲಾಗಿದೆ.

Leave A Reply

Your email address will not be published.