ಸುಳ್ಯ: ಅಲೆಟ್ಟಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಗೆ ಬೆಂಕಿ

0 4

ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ಕೃಷ್ಣ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಒಡೆದು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಫೆ.10 ರಂದು ನಡೆದಿದೆ.

ಫೆ.10 ರಂದು ಸಂಜೆ ಇವರ ಮನೆಯಲ್ಲಿ ಹೊಗೆ ಕಾಣಿಸಿಕೊಂಡಿದ್ದು ಸ್ವಲ್ಪ ಹೊತ್ತಿನಲ್ಲಿ ಭಾರಿ ಸದ್ದು ಕೇಳಿಸಿತು. ಮನೆಯ ಒಳಗೆ ಗ್ಯಾಸ್ ಸಿಲಿಂಡರ್ ಒಡೆದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ.

ಮನೆಯ ಎದುರಲ್ಲಿದ್ದ ತೆಂಗಿನ ಮರದ ಮೇಲೆ ಬೆಂಕಿಯ ಉಂಡೆ ಹಾರಿ ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡಿತು. ಮನೆಯಲ್ಲಿ ಕೃಷ್ಣ ಎಂಬವರ ಪತ್ನಿ ಮತ್ತು ಮಗಳು ಮಾತ್ರ ವಾಸವಿದ್ದರು. ಬೆಳಿಗ್ಗೆ ಅವರಿಬ್ಬರು ಸುಳ್ಯಕ್ಕೆ ಹೊಗಿದ್ದು ಮನೆಯಲ್ಲಿ ಯಾರೂ ಇಲ್ಲವಾದ್ದರಿಂದ ಪ್ರಾಣಹಾನಿ ಸಂಭವಿಸಿಲ್ಲ.

Leave A Reply