ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಂದ ಭಜನ ಸತ್ಸಂಗ ಸಮಾವೇಶ ಸಮಿತಿ ಪದಾಧಿಕಾರಿಗಳಿಗೆ ಅಭಿನಂದನೆ

ಪುತ್ತೂರು: ಫೆ. 8ರಂದು ಪುತ್ತೂರಿನಲ್ಲಿ ಇತಿಹಾಸ ನಿರ್ಮಾಣ ಮಾಡಿದ ಭಜನಾ ಸತ್ಸಂಗ ಸಮಾವೇಶ 2020 ಯಶಸ್ವಿಗಾಗಿ ಸಮಿತಿ ಪದಾಧಿಕಾರಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಅಭಿನಂದಿಸಿದ್ದಾರೆ.


Ad Widget

Ad Widget

Ad Widget

Ad Widget
Ad Widget

Ad Widget
ಡಾ.ಹೆಗ್ಗಡೆ ಅವರೊಂದಿಗೆ

ಫೆ. 10ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿಯವರ ನೇತೃತ್ವದಲ್ಲಿ ಕ್ಷೇತ್ರಕ್ಕೆ ತೆರಳಿ ಭಜನಾ ಸತ್ಸಂಗ ಸಮಾವೇಶ ಸಮಿತಿಯ ಪದಾಧಿಕಾರಿಗಳು ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.


Ad Widget
ಹೇಮಾವತಿ ಹೆಗ್ಗಡೆ ಅವರೊಂದಿಗೆ

ಭಜನಾ ಸತ್ಸಂಗ ಸಮಾವೇಶ ಸಮಿತಿ ಅಧ್ಯಕ್ಷರಾದ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ, ಜಿಲ್ಲಾ ಸಂಚಾಲಕ ಶಶಿ ಕುಮಾರ್ ರೈ ಬಾಲ್ಯೊಟ್ಟು, ಭಜನಾ ಪರಿಷತ್ ರಾಜ್ಯ ಕಾರ್ಯದರ್ಶಿ ಜಯರಾಮ್ ನೆಲ್ಲಿತ್ತಾಯ, ಯೋಜನಾಧಿಕಾರಿ ಜನಾರ್ಧನ ಎಸ್.ವಿವಿಧ ಉಪ ಸಮಿತಿಯ ಸಂಚಾಲಕರಾದ ರಾಜೇಶ್ ಬನ್ನೂರು, ವಿಶ್ವನಾಥ ಗೌಡ ಬನ್ನೂರು, ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು, ಕೋಶಾಧಿಕಾರಿ ಚಂದ್ರನ್ ತಲೆಪಾಡಿ, ದೀಕ್ಷಿತ್ ಉರ್ಲಾಂಡಿ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಬ್ಬಯ್ಯ ರೈ ಪಡುಮಲೆ, ತಾಲೂಕಿನ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ರೈ ಒಳತ್ತಡ ಮತ್ತು ಪಾರ್ಶ್ವನಾಥ್ ಜೈನ್ ನೆಲ್ಯಾಡಿ ಉಪಸ್ಥಿತರಿದ್ದರು.

error: Content is protected !!
Scroll to Top
%d bloggers like this: