ಫೆ.12-14 | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ಉಳ್ಳಾಲ್ತಿ, ಉಳ್ಳಾಕುಲು, ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಫೆ.12-14 : ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ಉಳ್ಳಾಲ್ತಿ, ಉಳ್ಳಾಕುಲು, ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಪುತ್ತೂರು : ಧರ್ಮಸ್ಥಳದ ಧರ್ಮಾಧಿಕಾರಿ, ರಾಜರ್ಷಿ ಪದ್ಮಭೂಷಣ ಡಾ|ಡಿ.ವೀರೇಂದ್ರ ಹೆಗ್ಗಡೆಯವರ ಶುಭಾರ್ಷಿವಾದದೊಂದಿಗೆ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ಉಳ್ಳಾಲ್ತಿ, ಉಳ್ಳಾಕುಲು ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ.12 ರಿಂದ 14ರ ವರೆಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ವಿವಿಧ ದಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಕ್ಷೇತ್ರದಲ್ಲಿ ಜರಗಲಿದೆ.
ಫೆ.12ರ ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಪುಣ್ಯಾಹವಾಚನ, ಸ್ಥಳ ಶುದ್ಧಿ, ಪ್ರಾಸಾದ ಶುದ್ಧಿ, ರಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ನೂತನ ಬಿಂಬ ಜಲಧಿವಾಸ, ಪ್ರಾಕಾರ ದಿಕ್ಪಲಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ.
ಫೆ.13ರ ಪೂರ್ವಾಹ್ನ ಮಹಾಗಣಪತಿ ಹೋಮ, ಬ್ರಹ್ಮಕಲಶ ಪೂಜೆ, ಮೀನ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ಉಳಾಲ್ತಿ, ಊಳ್ಳಾಕುಲು, ಮಹಿಷಂತಾಯ, ಕಲ್ಕುಡ ಕಲ್ಲುರ್ಟಿ, ಪಂಜುರ್ಲಿ, ಪುರುಷಾಯ ಗುಳಿಗ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ತಂಬಿಲ ಸೇವೆ, ಮಂಗಳಾರತಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಮಧ್ಯಾಹ್ನದಿಂದ ಸಂಜೆಯವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಸಂಜೆ ದೈವಗಳ ಭಂಡಾರ ತೆಗೆಯುವುದು ಕಾರ್ಯಕ್ರಮ ಜರಗಲಿದೆ. ಸಂಜೆ ಸಭಾ ಕಾರ್ಯಕ್ರಮ ಜರಗಲಿದ್ದು, ಶಾಸಕರಾದ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಧಾಮ ಮಾಣಿಲ ಕ್ಷೇತ್ರದ ಮೋಹನದಾಸ ಸ್ವಾಮೀಜಿ ಶುಭಾಶೀರ್ವಚನ ನೀಡಲಿದ್ದಾರೆ. ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಡಾ|ಪ್ರಭಾಕರ್ ರಾವ್ರವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮೀನುಗಾರಿಕೆ, ಧಾರ್ಮಿಕ ದತ್ತಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಮರಿಕೆ, ತಾಲೂಕು ಪಂಚಾಯತ್ ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ಬೆಂಗಳೂರು ಬೆಳ್ಮಾರು ಎಸ್ಟೇಟ್ನ ಅರ್ಜುನ್ ಬೆಳ್ಮಾರು, ಪುತ್ತೂರು ನಗರಠಾಣೆಯ ಉಪ ನಿರೀಕ್ಷಕ ಸತ್ತಿವೇಲು, ಕಾಂಚನ ಹುಂಡೈ ವ್ಯವಸ್ಥಾಪಕ ನಿರ್ದೇಶಕ ಪ್ರಸಾದ್ ಕಾಂಚನ, ಸಂಪ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನುಳಿಯಾಲು ರವೀಂದ್ರ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೆ ಯೋಜನಾಧಿಕಾರಿ ಜನಾರ್ದನ ಎಸ್. ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ನಮ್ಮ ಟಿವಿಯ ಶಿರ್ತಾಡಿ ಸೋಮಶೇಖರ್ ಭಟ್ರವರ ನಿರ್ದೇಶನದಲ್ಲಿ ಪ್ರಕಾಶ್ ಮಹಾದೇವನ್, ರೂಪ ಪ್ರಕಾಶ್ ಮಹಾದೇವನ್ ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ನೃತ್ಯ-ಗಾನ-ವೈಭವ ಜರಗಲಿದೆ. ಫೆ.14 ರಂದು ಬೆಳಿಗ್ಗೆ ಶ್ರೀ ಉಳ್ಳಾಲ್ತಿ, ಉಳ್ಳಾಕುಲು, ಮಹಿಷಂತಾಯ, ಕಲ್ಕುಡ ಕಲ್ಲುರ್ಟಿ, ಪಂಜುರ್ಲಿ, ಪುರುಷರಾಯ ಗುಳಿಗ ದೈವಗಳ ನೇಮೋತ್ಸವ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಹೇಮನಾಥ ಶೆಟ್ಟಿ ಕಾವು, ಸಂಜೀವ ಪೂಜಾರಿ ಕೂರೇಲು, ಡಾ|ಕೆ.ಪಿ ಪುತ್ತೂರಾಯ, ಅಧ್ಯಕ್ಷ ಸತೀಶ್ ರೈ ಮಿಶನ್ಮೂಲೆ, ಪ್ರಧಾನ ಕಾರ್ಯದರ್ಶಿ ದಿನೇಶ್ ರೈ ಮೊಡಪ್ಪಾಡಿಮೂಲೆ, ಕೋಶಾಧಿಕಾರಿ ಸುರೇಶ್ ಪಿ. ತಿಳಿಸಿದ್ದಾರೆ.