ಕಾಣಿಯೂರು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಕಾಣಿಯೂರು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಕಾಣಿಯೂರು: ಶ್ರೀ ಜಗದ್ಗುರು ಶ್ರೀಮನ್ಮದ್ವಾಚಾರ್ಯ ಮೂಲ ಸಂಸ್ಥಾನಂ ಉಡುಪಿ ಶ್ರೀ ಕಾಣಿಯೂರು ಮಠದ ಜಾತ್ರೋತ್ಸವವು ಫೆ 21ರಿಂದ ಫೆ 25ರವರೆಗೆ ನಡೆಯಲಿದ್ದು, ಜಾತ್ರೋತ್ಸವದ ಗೊನೆ ಮುಹೂರ್ತ ಕಾರ್ಯಕ್ರಮವು ಫೆ 14ರಂದು ಕಾಣಿಯೂರು ಶ್ರೀ ಮಠದಲ್ಲಿ ನಡೆಯಿತು.

ಗೊನೆ ಮುಹೂರ್ತ

ಕಾಣಿಯೂರು ಶ್ರೀ ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಗೊನೆ ಕಡಿಯಲಾಯಿತು. ಈ ಸಂದರ್ಭದಲ್ಲಿ ಕಾಣಿಯೂರು ಮಠದ ವ್ಯವಸ್ಥಾಪಕರಾದ ನಿರಂಜನ್ ಆಚಾರ್, ಪುರೋಹಿತರಾದ ಬಾಲಕೃಷ್ಣ ಅಸ್ರಣ್ಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave A Reply

Your email address will not be published.