ಸೋಫಾದಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು

Share the Article

ಸೋಫಾದಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು

ಸುಳ್ಯ : ತಾಲೂಕಿನ ದೇವಚಳ್ಳ ಗ್ರಾಮದ ಕಂದ್ರಪ್ಪಾಡಿಯಲ್ಲಿ ಮಹಿಳೆಯೋರ್ವರು ಸೋಫಾ ಸೆಟ್ ನಿಂದ ಬಿದ್ದು ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ತಡವಾಗಿ ವರದಿಯಾಗಿದೆ.

ಕಂದ್ರಪ್ಪಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ತಂಗಮ್ಮ (75)ಎಂಬವರು ಫೆ.8 ರಂದು ಸೋಫಾ ಸೆಟ್ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು. ಗಾಯಗೊಂಡ ಅವರನ್ನು ಕೂಡಲೇ ಸುಳ್ಯದ ಕೆವಿಜಿ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಫೆ. 9 ರಂದು ನಿಧನರಾದರು.

ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply