Breaking news: ಯಮದೂತನಾದ ವೇಗ ದೂತ: ಬಂಡೆಗೆ ಬಡಿದ ಬಸ್ 9 ಸಾವು

ಕಾರ್ಕಳ: ಮೈಸೂರಿನಿಂದ ಬರುತ್ತಿದ್ದ ಬಸ್ಸೊಂದು ಬಂಡೆಗೆ ಢಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ಮುಳ್ನೂರ್ ಘಾಟ್ ಎಂಬಲ್ಲಿ ಫೆ.15ರಂದು ನಡೆದಿದೆ.


Ad Widget

Ad Widget

Ad Widget

Ad Widget
Ad Widget

Ad Widget

ಮೈಸೂರಿನಿಂದ ಖಾಸಗಿ ಕಂಪೆನಿಯು ಈ ಪ್ರವಾಸವನ್ನು ಆಯೋಜಿಸಿತ್ತು ಎಂದು ಹೇಳಲಾಗಿದ್ದು, ಬಸ್ ಮುಳ್ನೂರ್ ಘಾಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಂಡೆಗೆ ಢಿಕ್ಕಿ ಹೊಡೆದಿದೆ. ಬಸ್ ಬೆಂಗಳೂರು ಡಿ.ಬಿ.ಟ್ರಾವೆಲರ್ಸ್‌‌ ಸಂಸ್ಥೆ ಗೆ ಸೇರಿದ್ದಾಗಿದೆ.


Ad Widget

ಪರಿಣಾಮ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದವರು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಕಾರ್ಕಳದ ಆಸ್ಪತ್ರೆಗಳಲ್ಲಿ ಸೇರಿಸಲಾಗಿದೆ.

error: Content is protected !!
Scroll to Top
%d bloggers like this: