ಉಪ್ಪಿನಂಗಡಿ : ಮದುವೆ ಕಾರ್ಯಕ್ರಮಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ 11 ಜನರು ಗಂಭೀರ

ಉಪ್ಪಿನಂಗಡಿ : ಮದುವೆ ಕಾರ್ಯಕ್ರಮಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ 11 ಜನರು ಗಂಭೀರ ಗಾಯಗೊಂಡ ಘಟನೆ ಶಿರಾಡಿ ಗ್ರಾಮದ ಕೋಡಿಕಲ್ ಎಂಬಲ್ಲಿ ರವಿವಾರ ನಡೆದಿದೆ.

ಸಕಲೇಶಪುರದ ಬಾಲುಪೇಟೆಯಿಂದ ಪುತ್ತೂರಿಗೆ ಬಸ್ ಸಂಚರಿಸುತ್ತಿತ್ತು. ಶಿರಾಡಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.

ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದರಲ್ಲಿ 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಏಳು ಆಂಬುಲೆನ್ಸ್ ಗಳು ಸ್ಥಳಕ್ಕೆ ಆಗಮಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave A Reply

Your email address will not be published.