ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಯೋಗದಲ್ಲಿ ಎರಡನೇ ವರ್ಷದ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯು ಫೆಬ್ರವರಿ 21, 22 ಮತ್ತು 23ರಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ದಿನಾಂಕ 21-02-2020 ರಂದು ಉದ್ಘಾಟನಾ ಕಾರ್ಯಕ್ರಮವು ನಡೆಯಲಿದ್ದು, ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀ ನಟರಾಜ್ ಆರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ
ಜೊತೆ ಕಾರ್ಯದರ್ಶಿಗಳು ಆಗಿರುವ ಶ್ರೀ ಕೃಷ್ಣ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

Ad Widget Ad Widget

Ad Widget

Ad Widget

ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯವಾದಿಗಳಾದ ಶ್ರೀ ವಿವೇಕ್ ಸುದ್ದಿ ರೆಡ್ಡಿ ಮತ್ತು ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿರುವ ಶ್ರೀ
ಮನೋಹರ್ ಕೆ. ವಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದಿನಾಂಕ 23-02-2020 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀ ಜಾನ್ ಮೈಕಲ್ ಕುನ್ದ ಸಮಾರೋಪ ಭಾಷಣವನ್ನು ಮಾಡಲಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಪಿ. ಈಶ್ವರ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀ ಎಂ ವಿ, ಇಂದ್ರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ದೇಶದ ವಿವಿಧ ಪ್ರತಿಷ್ಟಿತ ಕಾನೂನು ಕಾಲೇಜುಗಳ 30 ಕ್ಕೂ ಅಧಿಕ ತಂಡಗಳ ಭಾಗವಹಿಸುತ್ತಿವೆ. ಫೆಬ್ರವರಿ 21 ರಂದು ಪ್ರಾಥಮಿಕ ಹಂತದ ಸ್ಪರ್ಧೆಯು ನಡೆಯಲಿದ್ದು, 22 ರಂದು ಕ್ವಾರ್ಟರ್ ಫೈನಲ್ ಸ್ಪರ್ಧೆಯು ನಡೆಯಲಿದೆ.

ಫೆಬ್ರವರಿ 23 ರಂದು ಸೆಮಿ ಫೈನಲ್ ಮತ್ತು ಫೈನಲ್ ನಡೆಯಲಿದೆ. ಈ ಸ್ಪರ್ಧೆಯಿಂದ ವಿದ್ಯಾರ್ಥಿಗಳಿಗೆ
ವಕೀಲ ವೃತ್ತಿಯ ನೈಪುಣ್ಯತೆಯ ಜೊತೆಗೆ, ಸಂವಹನ ಶೈಲಿ, ಸಂಶೋಧನೆಯ ಮಹತ್ವವನ್ನು ತಿಳಿಸಿಕೊಡುತ್ತದೆ.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಕಾನೂನು ಕಾಲೇಜಿನ ಸಂಚಾಲಕರಾದ ಶ್ರೀ ವಿಜಯನಾರಾಯಣ ಕೆ.ಎಂ. ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ.
ರವೀಂದ್ರ ಬಿ. ಕೆ., ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ.ಪಿ., ಉಪನ್ಯಾಸಕರಾದ ಶ್ರೀ ಕುಮಾರ್ ಎಸ್, ಆಡಳಿತ ಸಮಿತಿಯ ಹಿರಿಯ ಸದಸ್ಯರಾದ ಶ್ರೀ ಗಣೇಶ್ ಜೋಶಿ ಉಪಸ್ಥಿತರಿದ್ದರು.

Leave a Reply

error: Content is protected !!
Scroll to Top
%d bloggers like this: