ತಬಸ್ಸುಮ್‍ಗೆ ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿ 2019ನೇ ಸಾಲಿನ ಪ್ರಶಸ್ತಿ ಪ್ರಕಟ

Share the Article

ಮಂಗಳೂರು: ಎಚ್‍ಐವಿ/ ಏಡ್ಸ್ ಬಾಧಿತ ಮಕ್ಕಳನ್ನು ತಾಯಿಯಂತೆ ಸಲಹುವ ಮೂಲಕ ಮಾನವೀಯ ಸೇವೆ ಮಾಡುತ್ತಿರುವ ತಬಸ್ಸುಮ್ ಅವರು ಮಂಗಳೂರು ಪ್ರೆಸ್ ಕ್ಲಬ್‍ನ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಂಗಳೂರು ಕೊಣಾಜೆ ಸಮೀಪದ ನಿವಾಸಿ ತಬಸ್ಸುಮ್ ಅವರನ್ನು ಪ್ರೊ.ಬಾಲಕೃಷ್ಣ ಗಟ್ಟಿ, ಡಾ.ವಸಂತ ಕುಮಾರ್ ಪೆರ್ಲ ಮತ್ತು ಡಾ.ನಾಗವೇಣಿ ಮಂಚಿ ನೇತೃತ್ವದ ಆಯ್ಕೆ ಸಮಿತಿಯು 2019ನೇ ವರ್ಷದ ಮಂಗಳೂರು ಪ್ರೆಸ್ ಕ್ಲಬ್‍ನ ಪ್ರಶಸ್ತಿಗೆ ಬುಧವಾರ ಆಯ್ಕೆ ಮಾಡಿದೆ.

ಫೆ. 29ರಂದು ಪ್ರಶಸ್ತಿ ಪ್ರದಾನ

ಉರ್ವ ರಾಧಾಕೃಷ್ಣ ಮಂದಿರದ ಸಭಾಂಗಣದಲ್ಲಿ 2020ರ ಫೆಬ್ರವರಿ 29ರಂದು ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಂದು ತಬಸ್ಸುಮ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳೂರು ಪ್ರೆಸ್ ಕ್ಲಬ್‍ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.