ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಬೆಂಗಳೂರಿನ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ನೇಮಕ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಬೆಂಗಳೂರಿನ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ನೇಮಕಗೊಂಡಿದ್ದಾರೆ.
ಇವರು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಮೂಡಬಿದ್ರೆಯ ಶ್ರೀ ವೀರಮಾರುತಿ ದೇವಸ್ಥಾನ ಕೋಟೆ ಬಾಗಿಲು ಆಡಳಿತ ಮೊಕ್ತೇಸರರಾಗಿ, ಹಾಗೂ ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.