ಫೆ.22 : ಸವಣೂರು ಸರಕಾರಿ ಕಾಲೇಜು ಕಟ್ಟಡ ಉದ್ಘಾಟನೆ

Share the Article

ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂ.ಆರ್.ಪಿ.ಎಲ್‍ನ ಸಿಎಸ್‍ಆರ್ ಅನುದಾನದಲ್ಲಿ ನಿರ್ಮಾಣವಾದ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಸಮಾರಂಭ ಫೆ 22 ನೇ ಶನಿವಾರ ನಡೆಯಲಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ.

ಸುಳ್ಯ ಶಾಸಕ ಎಸ್ .ಅಂಗಾರ ಸಭೆಯ ಅಧ್ಯಕ್ಷತೆವಹಿಸಲಿದ್ದಾರೆ. ತಾಲೂಕು ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಉಪಾಧ್ಯಕ್ಷೆ ಲಲಿತಾ ಈಶ್ವರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರಮೀಳಾ ಜನಾರ್ಧನ್, ತಾ.ಪಂ ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ, ಸವಣೂರು ಗ್ರಾ.ಪಂ ಅಧ್ಯಕ್ಷೆ ಇಂದಿರಾ ಬಿ.ಕೆ, ಪುತ್ತೂರು ಎ.ಪಿ.ಎಂಸಿ ಅಧ್ಯಕ್ಷ ದಿನೇಶ್ ಮೆದು, ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೆಶಕ ವಿಷ್ಣುಮೂರ್ತಿ, ಸವಣೂರು ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸಕೃತರಾದ ಎಸ್ .ಕೆ.ಆನಂದ್ ಪುತ್ತೂರು, ಸುರೇಶ್ ರೈ ಸೂಡಿಮುಳ್ಳು ಹಾಗೂ ಉಪ್ಪಿನಂಗಡಿ ರೋಟರಿ ಅಧ್ಯಕ್ಷ ಅಬ್ದುಲ್ ಸಮದ್, ಮಂಡೂರು ಗ್ರಾಮ ಪಂ ಮಾಜಿ ಸದಸ್ಯ ವಿಶ್ವಂಭರ ಶೇಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಗಿರಿಶಂಕರ ಸುಲಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.