ಇಂದು ಜಿಲ್ಲಾ ಬಿಜೆಪಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀಮತಿ ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ ಮತ್ತು ಸುಧೀರ್ ಶೆಟ್ಟಿ ಕಣ್ಣೂರು ಇವರು ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಗಿದಿದ್ದು ಎಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಾಡಿದ್ದು 24 ನೇ ಸೋಮವಾರ ಮಂಗಳೂರಿನ ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಲಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಇತ್ತೀಚೆಗೆ ಆಯ್ಕೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ ಇವರು ನಿರ್ಗಮಿತ ಅಧ್ಯಕ್ಷರು ಪುತ್ತೂರಿನ ಶಾಸಕರು ಆಗಿರುವ ಶ್ರೀ ಸಂಜೀವ ಮಠಂದೂರು ಅವರ ಕೈಯಿಂದ ಬಿಜೆಪಿಯ ಬಾವುಟ ಹಸ್ತಾಂತರಿಸಿಕೊಳ್ಳುವ ಮೂಲಕ ಅಧಿಕೃತವಾಗಿ ಅಧಿಕಾರವನ್ನು ಹಸ್ತಾಂತರಿಸಿ ಕೊಡಲಾಗುತ್ತದೆ.

ಬಿಜೆಪಿಯ ಜಿಲ್ಲಾ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಹಾಲಿ ಬಿಜೆಪಿ ರಾಜ್ಯ ಅಧ್ಯಕ್ಷರು ಆಗಿರುವ ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಗಮಿಸಲಿದ್ದಾರೆ.

ಉಳಿದಂತೆ ತಾಲೂಕಿನ ಎಲ್ಲಾ ಶಾಸಕರುಗಳು ಮತ್ತು ವಿವಿಧ ಮಂಡಲ ಅಧ್ಯಕ್ಷರು ಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಹಾಜರಿರಲಿದ್ದಾರೆ.

error: Content is protected !!
Scroll to Top
%d bloggers like this: