ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಫೆ.22ರಂದು ನಡೆಯಿತು.


Ad Widget

Ad Widget

Ad Widget

Ad Widget

Ad Widget

Ad Widget

ಕ್ರೀಡಾಕೂಟ ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕ. ಅದರೊಂದಿಗೆ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದರೊಂದಿಗೆ ಸಹಬಾಳ್ವೆಯನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ ಎಂದರು.

ವೇದಿಕೆಯಲ್ಲಿ ಸಂಸ್ಥೆಯ ಆಡಳಿತಾಽಕಾರಿ ಅಶ್ವಿನ್ ಎಲ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮೀ ಎಸ್ ರೈ, ಉಪಪ್ರಾಂಶುಪಾಲ ಶೇಷಗಿರಿ ಎಂ ಹಾಗೂ ಕ್ರೀಡಾ ಸಂಘಟಕಿ ಸುಮ ಎಸ್ ಉಪಸ್ಥಿತರಿದ್ದರು.

ಕ್ರೀಡಾಪಟುಗಳಿಗೆ ಕ್ರೀಡಾ ಸಂಘಟನೆಯ ಜತೆ ಕಾರ್ಯದರ್ಶಿ ಭಾರತಿ ಕೆ. ಅವರು ಪ್ರತಿಜ್ಞೆಯನ್ನು ಬೋಽಸಿದರು.

ವಿದ್ಯಾರ್ಥಿಗಳಾದ ಶ್ರಾವ್ಯ ಎನ್ ಕೆ ಸ್ವಾಗತಿಸಿ, ಅನುಶ್ರೀ ವಂದಿಸಿದರು. ಕು.ರಫೀನಾ ಎಂ ಎಲ್ ಕಾರ್ಯಕ್ರಮ ನಿರೂಪಿಸಿದರು.  .

error: Content is protected !!
Scroll to Top
%d bloggers like this: