ಸಂಭ್ರಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವರ ಜಾತ್ರೆ

ಪುತ್ತೂರು : ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಹಾಗೂ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾ ಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಹಾಗೂ 29ನೇ ವರ್ಷದ ಸತ್ಯನಾರಾಯಣ ಪೂಜೆ,ಪರಿವಾರ ದೈವಗಳ ನೇಮೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.23ರಂದು ನಡೆಯಿತು.

ದೇವರ ಬಲಿ

ಫೆ.23ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಬಳಿಕ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.


Ad Widget

Ad Widget

Ad Widget

Ad Widget

Ad Widget

Ad Widget
ವಲ್ಮಿಕ ರೂಪಿ ಸುಬ್ರಹ್ಮಣ್ಯ

ರಾತ್ರಿ ದೈವಗಳ ಭಂಡಾರ ತೆಗೆದ ಬಳಿಕ ವಲ್ಮೀಕ ರೂಪಿ ಸುಬ್ರಹ್ಮಣ್ಯ ದೇವರಿಗೆ ರಂಗಪೂಜೆ ನಡೆಯಿತು.

ಗಣಪತಿ

ಸಂಜೆ 7ರಿಂದ ಗುರುಪ್ರಿಯಾ ಶಿವಾನಂದ ನಾಯಕ್ ನಿರ್ದೆಶನದಲ್ಲಿ ಗುರುಕು ಕಲಾಕೇಂದ್ರ ಪುತ್ತೂರು ತಂಡದ ಭಕ್ತಿ ಗೀತಾ ಗಾಯನ ನಡೆಯಿತು.ವಿಶೇಷ ಅತಿಥಿಯಾಗಿ ಕಲರ್ಸ್ ಕನ್ನಡ ಕನ್ನಡ ಕೋಗಿಲೆಯ ಅಪೇಕ್ಷಾ ಪೈ ಭಕ್ತಿ ಗೀತೆಗಳನ್ನು ಹಾಡಿದರು.ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ವಿಶೇಷತೆ

ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುತ್ತಕ್ಕೆ ಆರಾಧನೆ ನಡೆಯುತ್ತದೆ.ಆದರಿಂದ ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ ಕಂಕಣ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕೆ,ಉದ್ಯೋಗ,ಇಷ್ಟಾರ್ಥ ಸಿದ್ದಿಗೆ,ವಿದ್ಯೆಗಾಗಿ ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಇಲ್ಲಿ ನಿತ್ಯ ಅರ್ಚಕರು ನಾಗನಿಗೆ ಪೂಜೆ ಸಲ್ಲಿಸುತ್ತಾರೆ. ಪೂಜೆಯ ಬಳಿಕ ಬಟ್ಟಲಲ್ಲಿ ಹಾಲು-ನೀರು ಇಟ್ಟು ಬರುತ್ತಾರೆ.ಈ ಹಾಲನ್ನು ನಾಗ ಕುಡಿಯುತ್ತಾನೆ ಎಂಬ ನಂಬಿಕೆ ಇದೆ.ಇದಕ್ಕೆ ಪುಷ್ಟಿ ನೀಡುವಂತೆ ಈ ಕ್ಷೇತ್ರದ ಸುತ್ತ ನಾಗ ಪ್ರತ್ಯಕ್ಷನಾಗಿ ಕಾಣಿಸಿಕೊಳ್ಳುತ್ತಾನೆ.

ಹೊರೆಕಾಣಿಕೆ ಸಮರ್ಪಣೆ

ದೇವಳದಲ್ಲಿ ಪಕ್ಕದ ಸಣ್ಣ ಕುಂಡಿಕೆಯೊಂದರಲ್ಲಿ ನೀರು ಮೇಲೇಳುತ್ತಿರುವುದು ಇಲ್ಲಿನ ಇನ್ನೊಂದು ವೈಶಿಷ್ಟ್ಯ. ಇಲ್ಲಿಗೆ ಬರುವ ಭಕ್ತಾದಿಗಳು ಪುತ್ತೂರು-ಕುಂಬ್ರ-ಮಾಡಾವು-ಬೆಳ್ಳಾರೆ ರಸ್ತೆಯ ಮೂಲಕ ಅಂಕತ್ತಡ್ಕದಿಂದ ಸ್ವಲ್ಪ ಮುಂದೆ ಸಾಗಿದಾಗ ಸಿಗುವ ತಿರುವ ರಸ್ತೆಯಲ್ಲಿ ತೆರಳ ಬಹುದು. ಸವಣೂರು-ಬೆಳ್ಳಾರೆ ರಸ್ತೆಯಲ್ಲಿ ಬಂಬಿಲ-ಮಂಜುನಾಥನಗರ ರಸ್ತೆಯ ಮೂಲಕ ಅಂಕತಡ್ಕಕ್ಕೆ ಬಂದು ಕ್ಷೇತ್ರಕ್ಕೆ ಬರಬಹುದಾಗಿದೆ.

ಇಲ್ಲಿ ಹುತ್ತದ ರೂಪದಲ್ಲಿರುವ ಸುಬ್ರಹ್ಮಣ್ಯನಿಗೆ ರಂಗಪೂಜೆ,ಹೂವಿನ ಪೂಜೆ ಹಾಗೂ ಕ್ಷೇತ್ರದಲ್ಲಿ ರಾಹು ಜಪ,ಆಶ್ಲೇಷ ಬಲಿ,ಕುಂಕುಮಾರ್ಚಣೆ,ಕಾರ್ತಿಕ ಪೂಜೆ ,ನಾಗನ ಕಟ್ಟೆಯಲ್ಲಿ ನಾಗತಂಬಿಲ ಹಾಗೂ ಇತರ ಸೇವೆಗಳಾದ ಆಶ್ಲೇಷ ಬಲಿ,ಸರ್ಪ ಸಂಸ್ಕಾರ,ನವಗ್ರಹ ಶಾಂತಿ ಹೋಮ ನಡೆಯುತ್ತದೆ.

error: Content is protected !!
Scroll to Top
%d bloggers like this: